HomeKarnatakaಅನುಮಾನಾಸ್ಪದ ರೀತಿಯಲ್ಲಿ ಪತ್ನಿಯ ಶವ ಪತ್ತೆ: ಪತಿ ಅರೆಸ್ಟ್

ಅನುಮಾನಾಸ್ಪದ ರೀತಿಯಲ್ಲಿ ಪತ್ನಿಯ ಶವ ಪತ್ತೆ: ಪತಿ ಅರೆಸ್ಟ್

ಕೋಲಾರ: ಮಹಿಳೆಯೊಬ್ಬರು ಮನೆಯಲ್ಲಿಯೆ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯ ಪತಿಯನ್ನು ಪೊಲಿಸರು ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ನಂದಿನಿ (24) ಮೃತ ಮಹಿಳೆ. ಪತಿ ನಾಗೇಶ್ ಬಂಧಿತ ಆರೋಪಿ. ಕೋಲಾರ ತಾಲೂಕಿನ ತೊಟ್ಲಿ ಗ್ರಾಮದ ನಂದಿನಿ, ಅನಾಥ ವ್ಯಕ್ತಿ ನಾಗೇಶ್ ನನ್ನು ವಿವಾಹವಾಗಿದ್ದಳು. ಕಳೆದ ರಾತ್ರಿ ನಾಗೇಶ್ ಕುಡಿದು ಬಂದು ಪತ್ನಿ ಜೊತೆ ಜಗಳವಾಡಿದ್ದ ಎನ್ನಲಾಗಿದೆ. ಈ ವೇಳೆ ಪತ್ನಿಯ ಕತ್ತು ಹಿಸುಕಿ ಕೊಲೆಗೈದಿರುವ ಶಂಕೆಯನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಪತಿ ನಾಗೇಶ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular