ಕೋಲಾರ: ತಂದೆ-ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಕುಂಬರಪಾಳ್ಯದಲ್ಲಿ ನಡೆದಿದೆ.
ಗಣೇಶ್ (29) ಮೃತ ದುರ್ದೈವಿ. ಮದುವೆಯಾಗಿ ಒಂದು ವರ್ಷವಾಗಿತ್ತು. ಕೆಲಸ ಮಾಡಿ ಹೆಂಡಿತಿ-ಮಕ್ಕಳನ್ನು ಚನ್ನಾಗಿ ನೋಡಿಕೊಳ್ಳುವುದನ್ನು ಬಿಟ್ಟು ಗೆಳೆಯರ ಜೊತೆ ಓಡಾಡಿಕೊಂಡಿದ್ದು ಕಾಲಹರಣ ಮಾಡುತ್ತಿದ್ದ. ಇದನ್ನು ಪ್ರಶ್ನೆ ಮಾಡಿ ತಂದೆ-ತಾಯಿ ಬುದ್ಧಿ ಹೇಳಿದ್ದರು. ಹೆಂಡತಿ-ಮಕ್ಕಳನ್ನು ಜವಾಬ್ದಾರಿಯಿಂದ ನೋಡಿಕೊಳ್ಳುವಂತೆ ಬುದ್ಧಿವಾದ ಹೇಳಿದ್ದಾರೆ.
ಇಷ್ಟಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮುಳಬಾಗಿಲು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.