HomeLatest Newsಜವಾಬ್ದಾರಿ ಬಗ್ಗೆ ಬುದ್ಧಿವಾದ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವಕ

ಜವಾಬ್ದಾರಿ ಬಗ್ಗೆ ಬುದ್ಧಿವಾದ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವಕ

ಕೋಲಾರ: ತಂದೆ-ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಕುಂಬರಪಾಳ್ಯದಲ್ಲಿ ನಡೆದಿದೆ.

ಗಣೇಶ್ (29) ಮೃತ ದುರ್ದೈವಿ. ಮದುವೆಯಾಗಿ ಒಂದು ವರ್ಷವಾಗಿತ್ತು. ಕೆಲಸ ಮಾಡಿ ಹೆಂಡಿತಿ-ಮಕ್ಕಳನ್ನು ಚನ್ನಾಗಿ ನೋಡಿಕೊಳ್ಳುವುದನ್ನು ಬಿಟ್ಟು ಗೆಳೆಯರ ಜೊತೆ ಓಡಾಡಿಕೊಂಡಿದ್ದು ಕಾಲಹರಣ ಮಾಡುತ್ತಿದ್ದ. ಇದನ್ನು ಪ್ರಶ್ನೆ ಮಾಡಿ ತಂದೆ-ತಾಯಿ ಬುದ್ಧಿ ಹೇಳಿದ್ದರು. ಹೆಂಡತಿ-ಮಕ್ಕಳನ್ನು ಜವಾಬ್ದಾರಿಯಿಂದ ನೋಡಿಕೊಳ್ಳುವಂತೆ ಬುದ್ಧಿವಾದ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಷ್ಟಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮುಳಬಾಗಿಲು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular