ಕೋಲಾರ: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ.ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಶಿವಲಿಂಗ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಟ್ಲಹಳ್ಳಿ ಗ್ರಾಮದ ಬ್ಯಾಟರಾಮಪ್ಪ (32) ಮೃತ ದುರ್ದೈವಿ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾರೆ. ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

