HomeKarnatakaBREAKING: ಬಾಲ್ಯವಿವಾಹ ತಡೆದ ಅಂಗನವಾಡಿ ಕಾರ್ಯಕರ್ತೆಯ ಹತ್ಯೆಗೆ ಯತ್ನ: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ

BREAKING: ಬಾಲ್ಯವಿವಾಹ ತಡೆದ ಅಂಗನವಾಡಿ ಕಾರ್ಯಕರ್ತೆಯ ಹತ್ಯೆಗೆ ಯತ್ನ: ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ

ಕೋಲಾರ: ಬಾಲ್ಯವಿವಾಹ ತಡೆದಿದ್ದಕ್ಕೆ ಅಂಗನವಾಡಿ ಕಾರ್ಯಕರ್ತೆಯನ್ನೇ ಹತ್ಯೆಗೈಯ್ಯಲು ಯತ್ನಿಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಜೆ.ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ ಮೇಲೆ ದುರುಳರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಬಾಲಕಿ ಮದುವೆಯನ್ನು ತಡೆದಿದ್ದ ಪದ್ಮಾವತಿ, ಆಕೆಯನ್ನು ರಕ್ಷಿಸಿ ಕೆಜಿಎಫ್ ಮಸ್ಕಾಂನಲ್ಲಿರುವ ಬಾಲಮಂದಿರಕ್ಕೆ ಬಾಲಕಿಯನ್ನು ಸೇರಿದ್ದರು. ಇದರಿಂದ ಆಕ್ರೋಶಗೊಂಡ ಬಾಲಕಿ ಪೋಷಕರು, ಪದ್ಮಾವತಿ ಮೇಲೆ ಹಲ್ಲೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಭೀರವಾಗಿ ಹಲ್ಲೆಗೊಳಗಾಗಿರುವ ಪದ್ಮಾವತಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular