ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಪುರೋಹಿತರೊಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬದ್ದಿಪಲ್ಲಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಗುಡಿಪಲ್ಲಿ ಗ್ರಾಮದ ಲೋಕೇಶ್ (45) ಮೃತ ಪುರೋಹಿತರು. ಕಾರ್ಯಕ್ರಮ ಮುಗಿಸಿ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಗೌನಿಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

