HomeKarnatakaBREAKING: ರೌಡಿಶೀಟರ್ ಗಳ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ದಿಢೀರ್ ಪೊಲೀಸರ ದಾಳಿ: ಅಪಾರ ಪ್ರಮಾಣದ...

BREAKING: ರೌಡಿಶೀಟರ್ ಗಳ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ದಿಢೀರ್ ಪೊಲೀಸರ ದಾಳಿ: ಅಪಾರ ಪ್ರಮಾಣದ ಮಾರಕಾಸ್ತ್ರಗಳು ಜಪ್ತಿ

ಕೋಲಾರ: ಪೊಲೀಸರು ರೌಡಿಶೀಟರ್ ಗಳಿಗೆ ಬೆಳಂ ಬೆಳಿಗ್ಗೆ ಬೆವರಿಳಿಸಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ಪಟ್ಟಣದ ವ್ಯಾಪ್ತಿಯಲ್ಲಿನ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕೆಜಿಎಫ್ ನಗರದ ಆಂಡರ್ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಸೆಪಾಳ್ಯ, ಸೊರೆಕಾಯಿ ಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒಟ್ಟು 10 ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಳಿ ನಡೆಸಲು ಐದು ಸಬ್-ಇನ್ಸ್‌ಪೆಕ್ಟರ್‌ಗಳು ಮತ್ತು ಐದು ಇನ್ಸ್‌ಪೆಕ್ಟರ್‌ಗಳ ತಂಡವನ್ನು ರಚಿಸಲಾಗಿತ್ತು. ಪ್ರತಿಯೊಬ್ಬ ರೌಡಿಶೀಟರ್‌ಗಳಿಗೂ ಒಂದೊಂದು ತಂಡವನ್ನು ನಿಯೋಜಿಸಲಾಗಿತ್ತು. ಈ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ರೌಡಿಗಳ ಮನೆಗಳಲ್ಲಿ ಲಾಂಗ್ ಮತ್ತು ಮಚ್ಚು ಸೇರಿದಂತೆ ಹಲವು ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಅವನ್ನು ವಶಕ್ಕೆ ಪಡೆಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular