ಕೋಲಾರ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವ ಘತನೆ ಹೆಚ್ಚುತ್ತಿದೆ. ಅಪ್ರಾಪ್ತ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರದ ಗಾಂಧಿನಗರದ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 17 ವರ್ಷದ ಪವನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಪೋಷಕರು ಮನೆಗೆ ಬಂದು ನೋಡಿದಾಗಲೇ ಘಟನೆ ಬೆಳಕಿಗೆ ಬಂದಿದೆ. ಬಾಲಕನ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ.
ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಗನನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

