HomeKarnatakaಅಪಘಾತದಲ್ಲಿ ಕಾಲು ಕಳೆದುಕೊಂಡರೂ ಸ್ಟ್ರೆಚರ್ ನಲ್ಲಿ ಮಲಗಿಯೇ ಪರೀಕ್ಷೆ ಬರೆದ ವಿದ್ಯಾರ್ಥಿನಿ: ಮಗಳ ಚಿಕಿತ್ಸೆಗಾಗಿ ಕಿಡ್ನಿ...

ಅಪಘಾತದಲ್ಲಿ ಕಾಲು ಕಳೆದುಕೊಂಡರೂ ಸ್ಟ್ರೆಚರ್ ನಲ್ಲಿ ಮಲಗಿಯೇ ಪರೀಕ್ಷೆ ಬರೆದ ವಿದ್ಯಾರ್ಥಿನಿ: ಮಗಳ ಚಿಕಿತ್ಸೆಗಾಗಿ ಕಿಡ್ನಿ ಮಾರಲು ಮುಂದಾದ ತಂದೆಗೆ ಆರ್ಥಿಕ ನೆರವು ನೀಡಿದ ಶಾಸಕ ಸುರೇಶ್ ಕುಮಾರ್

ಕೋಲಾರ: ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ ಸ್ಟ್ರೆಚರ್ ನಲ್ಲಿ ಬಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಚಿಕಿತ್ಸೆಗಾಗಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.

ಕೋಲಾರ ಜಿಲ್ಲೆಯ ಕೆಜಿಎಫ್‌ನ ಕುಸುಮಾ ಎಂಬ ವಿದ್ಯಾರ್ಥಿನಿ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರು. ಆದಾಗ್ಯೂ ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಆದರೆ ಇತ್ತೀಚೆಗೆ ಆಕೆಯ ಚಿಕಿತ್ಸಾ ವೆಚ್ಚ ಬರಿಸಲಾಗದೇ ಬಾಲಕಿಯ ತಂದೆ ತನ್ನ ಕಿಡ್ನಿ ಮಾರಲು ಮುಂದಾಗಿದ್ದರು. ಅವರ ಸಂಕಷ್ಟ ಅರಿತ ಮಾಜಿ ಸಚಿವ, ಶಾಸಕ ಸುರೇಶ್ ಕುಮಾರ್ ನೆರವಿಗೆ ಧಾವಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿಗಳ ನಿಧಿಯಿಂದ ಚಿಕಿತ್ಸೆ ಕೊಡಿಸಲು ಮುಂದಾಗಿ, ಬಾಲಕಿಯ ಕುಟುಂಬಕ್ಕೆ ನೆರವಾಗಿದ್ದಾರೆ. ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ ಸೆಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿನಿ 16 ವರ್ಷದ ಕುಸುಮಾ, ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಳು. ನಂತರ ಆಕೆಯನ್ನು ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗದಿದ್ದರೂ, ವಿದ್ಯಾಭ್ಯಾಸದ ಮೇಲೆ ಆಸಕ್ತಿ ಕಳೆದುಕೊಳ್ಳದ ಕುಸುಮಾ, ತನ್ನ ತಾಯಿಯೊಂದಿಗೆ ಆಂಬ್ಯುಲೆನ್ಸ್ ಮೂಲಕ ಕೆಜಿಎಫ್‌ನ ಸೆಂಟ್ ಜೋಸೆಫ್ ಶಾಲೆಗೆ ಬಂದು ಪರೀಕ್ಷೆಗೆ ಹಾಜರಾಗಿದ್ದಳು. ಸ್ಟ್ರೆಚರ್ ಬೆಡ್ ಮೇಲೆ ಮಲಗಿಕೊಂಡೇ ಆಕೆ ಪರೀಕ್ಷೆ ಬರೆದಿದ್ದರು. ವಿದ್ಯಾರ್ಥಿನಿಯ ಮನಃಸ್ಥೈರಯ್ ಎಲ್ಲರನ್ನೂ ನಿಬ್ಬೆರಗಾಗಿಸಿತ್ತು.

ವಿದ್ಯಾರ್ಥಿನಿಯ ಪರಿಸ್ಥಿತಿಯನ್ನು ಗಮನಿಸಿ, ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ನಾರಾಯಣಸ್ವಾಮಿ ಪರೀಕ್ಷೆ ಬರೆಯಲು ವಿಶೇಷ ಅನುಮತಿ ನೀಡಿದ್ದರು. ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿ ಬೆಂಗಳೂರಿನ ವೈಟ್‌ಫೀಲ್ಡ್‌ನ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಅಗತ್ಯವಿದ್ದ ಹಣದ ಕೊರತೆಯಿಂದ ತಂದೆ ಶಂಕರಪ್ಪ ಸಂಕಷ್ಟಕ್ಕೀಡಾಗಿ, ತನ್ನ ಕಿಡ್ನಿ ಮಾರಾಟ ಮಾಡುವ ನಿರ್ಧಾರಕ್ಕೆ ಬಂದಿದ್ದರು.

ವಿಷಯ ತಿಳಿದು ಮಾಜಿ ಸಚಿವ ಸುರೇಶ್ ಕುಮಾರ್ ತಕ್ಷಣ ಸ್ಪಂದಿಸಿ ನೆರವಿಗೆ ಬಂದಿದ್ದಾರೆ. ಅವರು ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರಿಗೆ ಮಾಹಿತಿ ನೀಡಿ, ಮುಖ್ಯಮಂತ್ರಿ ನಿಧಿಯಿಂದ ಚಿಕಿತ್ಸಾ ವೆಚ್ಚ ಭರಿಸುವ ವ್ಯವಸ್ಥೆ ಮಾಡಲು ಮುಂದಾಗಿದ್ದು, ಈ ಭರವಸೆಯಿಂದ ಕುಟುಂಬಕ್ಕೆ ಸಾಕಷ್ಟು ಆಶಾಭಾವ ಮೂಡಿದೆ. ಸುರೇಶ್ ಕುಮಾರ್ ಅವರ ಮಾನವೀಯ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular