HomeLatest NewsBREAKING: ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ: ಸಿನಿಮೀಯ ಶೈಲಿಯಲ್ಲಿ ಆರೋಪಿಯನ್ನು ಬೆನ್ನಟ್ಟಿ ಬಂಧಿಸಿದ ಪೊಲೀಸರು

BREAKING: ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ: ಸಿನಿಮೀಯ ಶೈಲಿಯಲ್ಲಿ ಆರೋಪಿಯನ್ನು ಬೆನ್ನಟ್ಟಿ ಬಂಧಿಸಿದ ಪೊಲೀಸರು

ಕೋಲಾರ: ಪತ್ನಿ ಮೇಲೆ ಅನುಮಾನಗೊಂಡ ಪತಿ ಮಹಾಶಯನೊಬ್ಬ ಆಕೆಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರದ ಕೆಜಿಎಫ್ ತಾಲೂಕಿನ ಚಿನ್ನದ ಗಣಿ ಗ್ರಾಮದ ಈ ಘಟನೆ ನಡೆದಿದೆ. ಈಶ್ವರಮ್ಮ ಕೊಲೆಯಾದ ಮಹಿಳೆ. ಆರೋಪಿ ಪತಿಯನ್ನು ಆಂಧ್ರಪ್ರದೇಶದ ಪೆದ್ದೂರು ಮೂಲದ ಗೋಪಿನಾಥ ಎಂದು ಗುರುತಿಸಲಾಗಿದೆ. ದಂಪತಿ ಇತ್ತೀಚೆಗೆ ಕೆಜಿಎಫ್ ತಾಲೂಕಿನ ಚಿನ್ನದ ಗಣಿ ಗ್ರಾಮದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಆಗಮಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಬಂಧಿಕರ ಭೇಟಿ ಮಾಡಿ ವಾಪಸ್ ಆಗುವ ಸಂದರ್ಭದಲ್ಲಿ ದಾರಿಯುದ್ದಕ್ಕೂ ದಂಪತಿಗಳ ನಡುವೆ ಜಗಳವಾಗಿದೆ. ಈ ನಡುವೆ ಪತ್ನಿಯ ಶೀಲದ ಮೇಲೆ ಮೊದಲೇ ಶಂಕೆ ಹೊಂದಿದ್ದ ಗೋಪಿನಾಥ, ಮಾತಿಗೆ ಮಾತು ಬೆಳೆಸಿ ಗಲಾಟೆ ಮಾಡಿದ್ದಾನೆ. ತನ್ನೊಂದಿಗೆ ತಂದಿದ್ದ ಮಚ್ಚಿನಿಂದ ಈಶ್ವರಮ್ಮ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಈಶ್ವರಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಊರಿಗಾಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಬಳಿಕ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಗೋಪಿನಾಥನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular