HomeKarnatakaBREAKING: ಕೆರೆಯಲ್ಲಿ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಮಹಿಳೆಯರಿಬ್ಬರು ನೀರುಪಾಲು

BREAKING: ಕೆರೆಯಲ್ಲಿ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಮಹಿಳೆಯರಿಬ್ಬರು ನೀರುಪಾಲು

ಕೋಲಾರ: ಕೆರೆಯಲ್ಲಿ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಮಹಿಳೆಯರಿಇಬ್ಬರೂ ನೀರುಪಾಲಾಗಿ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರದ ಅರಹಳ್ಳಿ ಕೆರೆಯಲ್ಲಿ ಈ ದುರಂತ ಸಂಭವಿಸಿದೆ. ಮೊಹಮದಿ (25) ಹಾಗೂ ಸಲ್ಮಾ (26) ನೀರುಪಾಲಾದ ಮಹಿಳೆಯರು. ಮನೆಯಲ್ಲಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಸಲ್ಮಾ ಎಂಬುವವರು ಬಂದಿದ್ದರು.

ಈ ವೇಳೆ ಸಲ್ಮಾ ಹಾಗೂ ಮೊಹಮದಿ ಬಟ್ಟೆ ತೊಳೆಯಲೆಂದು ಕೆರೆಗೆ ಹೋಗಿದ್ದಾಗ ಮಕ್ಕಳು ನೀರಿನಲ್ಲಿ ಕಾಲುಜಾರಿ ಬಿದ್ದಿದ್ದರು. ಅವರನ್ನು ರಕ್ಷಿಸಲೆಂದು ಸಲ್ಮಾ ಹಾಗೂ ಮೊಹಮದಿ ಕೆರೆಗೆ ಇಳಿದಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಇಬ್ಬರು ಮಹಿಳೆಯರು ಕೊಚ್ಚಿ ಹೋಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಲಾರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular