ತಾಂತ್ರಿಕ ದೋಷದಿಂದ ದೆಹಲಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ಕೋಲ್ಕತ್ತಾದಿಂದ ಹೊರಟಿದ್ದ ವಿಸ್ತಾರಾ ವಿಮಾನವು ತಾಂತ್ರಿಕ ದೋಷದಿಂದ ಶುಕ್ರವಾರ ದೆಹಲಿಗೆ ಮರಳಿದೆ. 160 ಪ್ರಯಾಣಿಕರಿದ್ದ ವಿಸ್ತಾರಾ ವಿಮಾನ ಯುಕೆ 707 ನವದೆಹಲಿಯ ಇಂದಿರಾ ಗಾಂಧಿ ಇಂಟರ್‌ನ್ಯಾಶನಲ್ (ಐಜಿಐ) ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

7 ಜುಲೈ 2023 ರಂದು ದೆಹಲಿಯಿಂದ ಕೋಲ್ಕತ್ತಾಗೆ ಕಾರ್ಯನಿರ್ವಹಿಸುತ್ತಿರುವ ವಿಸ್ತಾರಾ ಫ್ಲೈಟ್ UK 707 ನಲ್ಲಿ ತಾಂತ್ರಿಕ ಅಡಚಣೆ ಕಂಡುಬಂದಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ, ಪೈಲಟ್‌ ಗಳು ಹಿಂತಿರುಗಲು ನಿರ್ಧರಿಸಿ IGI ನಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಿದರು. ವಿಮಾನವನ್ನು ಅಗತ್ಯ ತಪಾಸಣೆಗೆ ಒಳಪಡಿಸಲಾಗಿದೆ. ಬದಲಿ ವಿಮಾನವನ್ನು ತಕ್ಷಣವೇ ವ್ಯವಸ್ಥೆಗೊಳಿಸಲಾಗಿದೆ ಎಂದು ದೆಹಲಿ ವಿಮಾನ ನಿಲ್ದಾಣ ವಿಸ್ತಾರಾ ಏರ್‌ಲೈನ್ಸ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read