ವೈದ್ಯೆ ಅತ್ಯಾಚಾರ-ಕೊಲೆ: ಸಂತ್ರಸ್ತೆ ದೇಹದಲ್ಲಿ 150 ಗ್ರಾಂ ವೀರ್ಯ ಪತ್ತೆ ವರದಿ ಶುದ್ಧ ಸುಳ್ಳು: ಕಟುವಾಗಿ ವಿರೋಧಿಸಿದ ಕೋಲ್ಕತ್ತಾ ಪೊಲೀಸ್ ಕಮಿಷನರ್

ಕೋಲ್ಕತ್ತಾ: ಕೋಲ್ಕತ್ತಾದ ಅತ್ಯಾಚಾರ-ಕೊಲೆಗೆ ಬಲಿಯಾದ ಮಹಿಳೆಯ ದೇಹದಲ್ಲಿ 150 ಗ್ರಾಂ ವೀರ್ಯ ಪತ್ತೆಯಾಗಿದೆ ಎಂಬ ವರದಿಗಳನ್ನು ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಕುಮಾರ್ ಗೋಯಲ್ ಶುಕ್ರವಾರ ಕಟುವಾಗಿ ನಿರಾಕರಿಸಿದ್ದಾರೆ.

ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವುದೇ ಆಧಾರವಿಲ್ಲದ ಹಲವಾರು ವದಂತಿಗಳು ಹರಡುತ್ತಿವೆ. ಅವುಗಳ ಆಧಾರದ ಮೇಲೆ ಬಹಳಷ್ಟು ತಜ್ಞರು ಎಂದು ಕರೆಯಲ್ಪಡುವವರು ನಿರೂಪಣೆಗಳನ್ನು ಮಾಡುತ್ತಿದ್ದಾರೆ. ಪ್ರಕರಣ ಈಗ ಸಿಬಿಐಗೆ ಹೋಗಿದ್ದು, ಸಂಸ್ಥೆಯ ಮೇಲೆ ನಂಬಿಕೆ ಇಡೋಣ. ನಮಗೆ ಸಿಕ್ಕ ಅಲ್ಪಾವಧಿಯಲ್ಲಿ ನಮ್ಮ ಅಧಿಕಾರಿಗಳು ಸಾಧ್ಯವಿರುವ ಎಲ್ಲವನ್ನೂ ತನಿಖೆ ಮಾಡಲು ಪ್ರಯತ್ನಿಸಿದರು ಎಂದು ಹೇಳಿದ್ದಾರೆ.

ನಮ್ಮ ತಂಡದಲ್ಲಿ ಯಾರಾದರೂ ಏನಾದರೂ ತಪ್ಪು ಮಾಡಿದ್ದರೆ ನಾವು ಕಾನೂನು ಕ್ರಮಕ್ಕೆ ಜವಾಬ್ದಾರರಾಗಿರುತ್ತೇವೆ. ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂತ್ರಸ್ತೆಯ ಕುಟುಂಬಕ್ಕೆ ನಾವು ತಿಳಿಸಿದ್ದು ತಪ್ಪು. ಆಕೆಯ ದೇಹದಲ್ಲಿ 150 ಗ್ರಾಂ ವೀರ್ಯ ಪತ್ತೆಯಾಗಿದ್ದು ತಪ್ಪು. ನಮ್ಮ ಅಧಿಕಾರಿಗಳು ಸಿಬಿಐಗೆ ಸಹಕರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ನಾವು ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದೇವೆ ಎಂದು ಏಕೆ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಕುಟುಂಬಸ್ಥರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ವೀಡಿಯೋಗ್ರಫಿ ಮಾಡಲಾಗಿದ್ದು, ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಮೂವರು ಸದಸ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಿದ್ದು, ವಿಡಿಯೋದಲ್ಲಿದೆ. ಸಿಬಿಐ ತನಿಖೆ ನಡೆಸಿದೆ. ಪಾರದರ್ಶಕತೆಗೆ ಸಂಬಂಧಿಸಿದಂತೆ ಯಾವುದೇ ಸಂದೇಹವಿಲ್ಲ ಎಂದು ಹೇಳಿದ್ದಾರೆ.

https://twitter.com/ANI/status/1824390922970468418

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read