HomeLatest Newsಕೊಲ್ಕತ್ತಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಕೇಸ್: ಬಾಗಲಕೋಟೆ ಯುವಕನಿಗೆ ಜಾಮೀನು

ಕೊಲ್ಕತ್ತಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಕೇಸ್: ಬಾಗಲಕೋಟೆ ಯುವಕನಿಗೆ ಜಾಮೀನು

ಕೊಲ್ಕತ್ತಾ: ಕೊಲ್ಕತ್ತಾದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕ್ಯಾಂಪಸ್ ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಪರಮಾನಂದ ಟೋಪಣ್ಣನವರ್(ಪರಮಾನಂದ ಜೈನ್)ಗೆ ಶನಿವಾರ ಜಾಮೀನು ನೀಡಲಾಗಿದೆ.

ದೂರುದಾರ ಯುವತಿ ತನಿಖೆಗೆ ಅಸಹಕಾರ ತೋರುತ್ತಿದ್ದು, ಹೇಳಿಕೆ ನೀಡಲು ಆಗಮಿಸಿಲ್ಲ. ಎರಡು ಬಾರಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಿಲ್ಲ ಎಂದು ಕೋರ್ಟ್ ಗಮನಕ್ಕೆ ತರಲಾಗಿದೆ. ಹೀಗಾಗಿ ಅಲಿಪುರ ಸ್ಥಳೀಯ ನ್ಯಾಯಾಲಯ 50 ಸಾವಿರ ರೂ. ಬಾಂಡ್ ಪಡೆದು ಆರೋಪಿ ಪರಮಾನಂದ ಜೈನ್ ಗೆ ಜಾಮೀನು ನೀಡಿದೆ. ಜುಲೈ 11ರಂದು ಅತ್ಯಾಚಾರ ಘಟನೆ ನಡೆದಿತ್ತು.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ನಿವಾಸಿಯಾಗಿರುವ ಪರಮಾನಂದ ಪಾಸ್ಪೋರ್ಟ್ ಜಪ್ತಿ ಮಾಡಲು ಸೂಚನೆ ನೀಡಲಾಗಿದೆ. ಕೊಲ್ಕತ್ತಾದಿಂದ ಹೊರ ಹೋಗದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular