ಕೋಲ್ಕತ್ತ: ಕೋಲ್ಕತ್ತ ಕಾನೂನು ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಘಟನೆ ನಡೆದು ಸುಮಾರು ಎರಡು ತಿಂಗಳ ಬಳಿಕ ಆರೋಪಿಗಳ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಅಲಿಪೋರ್ ನ್ಯಾಯಾಲಯದ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮುಂದೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಕಾಲೇಜಿನ ಹಳೆಯ ವಿದ್ಯಾರ್ಥಿ ಮನೋಜಿತ್ ಮಿಶ್ರಾ ಹಾಗೂ ಇತರ ಮೂವರು ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.