ಕೋಲ್ಕತ್ತಾ: ಕೋಲ್ಕತ್ತಾದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದಲ್ಲಿ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ.
ಕಾಲೇಜಿನ ಹುಡುಗರ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಲಾಗಿದೆ. ಹರಿದೇವಪುರ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡಿದ್ದಾರೆ. ಕೌನ್ಸೆಲಿಂಗ್ ಗಾಗಿ ಬಾಲಕರ ಹಾಸ್ಟೆಲ್ ಗೆ ಬರುವಂತೆ ಆರೋಪಿ, ವಿದ್ಯಾರ್ಥಿನಿಗೆ ಕರೆದಿದ್ದ. ಹಾಸ್ಟೆಲ್ ಗೆ ಬಂದ ವಿದ್ಯಾರ್ಥಿನಿಗೆ ವಿದ್ಯಾರ್ಥಿ ಪಾನೀಯದಲ್ಲಿ ಮತ್ತು ಬರುವ ವಸ್ತು ಬೆರೆಸಿ ಪನೀಯ ಕುಡಿಸಿ ಅತ್ಯಾಚಾರವೆಸಗಿದ್ದಾನೆ. ಕೃತ್ಯದ ಬಳಿಕ ಬೆದರಿಕೆಯೊಡ್ಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಸದ್ಯ ಆರೋಪಿ ವಿದ್ಯಾರ್ಥಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.