HomeKarnatakaಕೊಳ್ಳೆಗಾಲ ರೆಸಾರ್ಟ್ ನಲ್ಲಿ ಬರ್ತ್ ಡೇ ಆಚರಣೆ ಹೆಸರಲ್ಲಿ ಡ್ರಗ್ಸ್ ಪಾರ್ಟಿ: 15 ಜನರು ಡ್ರಗ್ಸ್...

ಕೊಳ್ಳೆಗಾಲ ರೆಸಾರ್ಟ್ ನಲ್ಲಿ ಬರ್ತ್ ಡೇ ಆಚರಣೆ ಹೆಸರಲ್ಲಿ ಡ್ರಗ್ಸ್ ಪಾರ್ಟಿ: 15 ಜನರು ಡ್ರಗ್ಸ್ ಸೇವಿಸಿರುವುದು ದೃಢ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಹೊರವಲಯದ ರೆಸಾರ್ಟ್ ವೊಂದರಲ್ಲಿ ಬೆಂಗಳೂರಿನ ರೌಡಿಶೀಟತ್ರ್ ಜಹೀರ್ ಹುಟ್ಟುಹಬ್ಬ ಆಚರಣೆ ನೆಪದಲ್ಲಿ ಡ್ರಗ್ಸ್ ಪಾರ್ಟಿ ಆಯೋಜಿಸಿದ್ದು, ಪೊಲೀಸರು ನಡೆಸಿದ ದಿಢೀರ್ ದಾಳಿಯಲ್ಲಿ ಬಯಲಾಗಿದೆ.

ರೆಸಾರ್ಟ್ ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ರೌಡಿಶೀಟರ್ ಜಹೀರ್ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಪೊಲೀಸರ ದಾಳಿ ವೇಳೆ ಜಹೀರ್ ಜನ್ಮದಿನದ ಅಂಗವಾಗಿ ವಿಶೇಷವಾಗಿ ಆಯೋಜಿಸಿದ್ದ ಪಾರ್ಟಿ ಇದಾಗಿದ್ದು, ಗಾಂಜಾ, ಚರಸ್ ಸೇರಿದಂತೆ ಮಾದಕ ವಸ್ತುಗಳ ಸೇವನೆ ಮಾಡಿ ಮೋಜು ಮಸ್ತಿಯಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾರ್ಟಿಯಲ್ಲಿ ಭಾಗಿಯಾದವರು ಗಾಂಜಾ ಹಾಗೂ ಚರಸ್ ಸೇವಿಸಿ ಮೋಜುಮಸ್ತಿಯಲ್ಲಿ ತೊಡಗಿದ್ದರು. ಬಳಿಕ ಪೊಲೀಸರು ನಡೆಸಿದ ವೈದ್ಯಕೀಯ ತಪಾಸಣೆಯಲ್ಲಿ 15 ಮಂದಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. ಈ ಪಾರ್ಟಿ ಕೊಳ್ಳೇಗಾಲದ ಎ1 ಕಾಂಟ್ರಾಕ್ಟರ್ ಫಯಾಜ್ ಖಾನ್ ಅವರ ರೆಸಾರ್ಟ್‌ನಲ್ಲಿ ನಡೆದಿದ್ದು, ಈ ವಿಚಾರ ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ. ಫಯಾಜ್ ಖಾನ್ ಪ್ರಭಾವಿ ರಾಜಕೀಯ ಸಂಪರ್ಕ ಹೊಂದಿರುವ ವ್ಯಕ್ತಿಯಾಗಿದ್ದು, ಕಾಂಗ್ರೆಸ್ ನಾಯಕರ ಆಪ್ತನೆಂದು ಹೇಳಲಾಗುತ್ತಿದೆ.

ಪಾರ್ಟಿಯಲ್ಲಿ ಜಹೀರ್ ಕುಟುಂಬ ಸದಸ್ಯರೂ ಭಾಗಿಯಾಗಿದ್ದರೆಂದು ಮೂಲಗಳು ತಿಳಿಸಿವೆ. ಮಹಿಳೆಯರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುತ್ತಿದ್ದು, ಲೇಡಿ ಕಾನ್ಸ್ಟೇಬಲ್‌ಗಳು ವಿಚಾರಣೆ ಮುಂದುವರಿಸಿದ್ದಾರೆ. ಸದ್ಯ ಎಲ್ಲಾ ಆರೋಪಿಗಳನ್ನು ಕೊಳ್ಳೇಗಾಲ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular