HomeKarnatakaದರ್ಶನ್ ಬಿಡುಗಡೆಗಾಗಿ ದೇವರ ಮೊರೆ ಹೋದ ವಿಜಯಲಕ್ಷ್ಮಿ: ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ

ದರ್ಶನ್ ಬಿಡುಗಡೆಗಾಗಿ ದೇವರ ಮೊರೆ ಹೋದ ವಿಜಯಲಕ್ಷ್ಮಿ: ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದಿದ್ದಾರೆ.

ಜೈಲಿಗೆ ಭೇಟಿ ನೀಡಿ ಪತಿಗೆ ಧೈರ್ಯ ತುಂಬುತ್ತಿರುವ ವಿಜಯಲಕ್ಷ್ಮಿ ಕಾನೂನು ಹೋರಾಟ ನಡೆಸುವ ಬಗ್ಗೆ ವಕೀಲರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಈಗ ದೇವರ ಮೊರೆ ಹೋಗಿರುವ ವಿಜಯಲಕ್ಷ್ಮಿ ಗುರುವಾರ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆಪ್ತರೊಂದಿಗೆ ಕೊಲ್ಲೂರಿಗೆ ಆಗಮಿಸಿದ ವಿಜಯಲಕ್ಷ್ಮಿ ಅವರು ಶುಕ್ರವಾರ ಬೆಳಗ್ಗೆ ನವ ಚಂಡಿಕಾ ಹೋಮ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular