BIG NEWS: ಕೊಂಡಾಣ ಕ್ಷೇತ್ರದ ದೈವಸ್ಥಾನದ ನಿರ್ಮಾಣ ಹಂತದ ಭಂಡಾರ ಮನೆ ಧ್ವಂಸ ಮಾಡಿದ ಕಿಡಿಗೇಡಿಗಳು

ಮಂಗಳೂರು: ಪ್ರಸಿದ್ಧ ಕೊಂಡಾಣ ಕ್ಷೇತ್ರದ ದೈವಸ್ಥಾನದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದಿದೆ.

ನಿರ್ಮಾಣ ಹಂತದ ಭಂಡಾರ ಮನೆಯನ್ನು ರಾತ್ರೋರಾತ್ರಿ ಜೆಸಿಬಿ ಮೂಲಕ ಧ್ವಂಸಗೊಳಿಸಲಾಗಿದೆ. ಪಿಲಿಚಾಮುಂಡಿ, ಬಂಟ, ವೈದ್ಯನಾಥ ದೇವಸ್ಥಾನಕ್ಕೆ ಸೇರಿದ ಭಂಡಾರಗಳನ್ನು ಇಡಲು ನೂತನವಾಗಿ ಕಟ್ಟಡ ನಿರ್ಮಿಸಲಾಗುತ್ತಿತ್ತು. ಆದರೆ ಈಗ ಏಕಾಏಕಿ ನಿರ್ಮಾಣ ಹಂತದ ಮನೆಯನ್ನೇ ಕೆಡವಲಾಗಿದೆ.

ದೈವಸ್ಥಾನದ ಆಡಳಿತ ಮಂಡಳಿ ವಿಚಾರವಾಗಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿತ್ತು. ಇದೇ ವಿಚಾರವಾಗಿ ಭಂಡಾರ ಮನೆ ಧ್ವಂಸ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದು ಬಿಗುವಿನ ವಾತಾವರಣ ಉಂಟಾದ ಹಿನ್ನೆಲೆಯಲ್ಲಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.

ಘಟನಾ ಸ್ಥಳಕ್ಕೆ ಎಸಿಪಿ ಧನ್ಯಾ ನಾಯಕ್, ತಹಶೀಲ್ದಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read