ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಸೇವೆಯ ಆಧಾರದ ಮೇಲಿನ ಹುದ್ದೆಗಳಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಐದು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ಪ್ರದೇಶಗಳಲ್ಲಿ ಒಟ್ಟು 28 ಅಂಗನವಾಡಿ ಕಾರ್ಯಕರ್ತೆಯರ ಮತ್ತು 187 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಒಟ್ಟು 215 ಹುದ್ದೆಗಳಿಗೆ ಗೌರವಧನ ಸೇವೆಯ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.
ಅರ್ಜಿ ಸಲ್ಲಿಕೆ ಆ. 25 ರಿಂದ ಆರಂಭವಾಗಲಿದ್ದು, ಸೆಪ್ಟೆಂಬರ್ 24 ಕೊನೆಯ ದಿನವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ koppal.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ವೆಬ್‌ಸೈಟ್‌ನ ಬಲಭಾಗದ ಮೇಲ್ಭಾಗದಲ್ಲಿರುವ ಅಧಿಸೂಚನೆಯಲ್ಲಿ ನೀಡಿರುವ ಅಭ್ಯರ್ಥಿಗಳ ಸೂಚನೆಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಓದಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಅಮರೇಶ ಹಾವಿನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

