HomeTourismಅನಧಿಕೃತ ರೆಸಾರ್ಟ್‌ಗಳ ವಿರುದ್ಧ ಕ್ರಮ: ಡಿಸಿ ಖಡಕ್ ಸೂಚನೆ

ಅನಧಿಕೃತ ರೆಸಾರ್ಟ್‌ಗಳ ವಿರುದ್ಧ ಕ್ರಮ: ಡಿಸಿ ಖಡಕ್ ಸೂಚನೆ

“ಕೊಪ್ಪಳ ಜಿಲ್ಲೆಯಲ್ಲಿರುವ ಅನಧಿಕೃತ ರೆಸಾರ್ಟ್‌ಗಳ ವಿರುದ್ಧ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಹೇಳಿದರು.

ಕೊಪ್ಪಳ ಜಿಲ್ಲೆಯಲ್ಲಿರುವ ಅನಧಿಕೃತ ರೆಸಾರ್ಟ್ ಮತ್ತು ಹೋಂಸ್ಟೇಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಅವರು ಸಭೆ ನಡೆಸಿದರು.

“ಈಗಾಗಲೇ ಎಫ್‌ಐಆರ್ ಆದ ರೆಸಾರ್ಟ್‌ಗಳ ಟ್ರೇಡ್ ಲೈಸೆನ್ಸ್ ರದ್ದುಪಡಿಸಿ ಇತರ ಕ್ರಮಗಳನ್ನು ಜರುಗಿಸಬೇಕು. ಪ್ರತಿಯೊಂದಕ್ಕೂ ನಾನೇ ಕರೆದು ತಮಗೆ ಹೇಳಬೇಕಾ?, ಹಾಗಾದರೆ ತಮ್ಮ ಜವಾಬ್ದಾರಿ ಏನು?” ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಕೆಲಸವನ್ನು ಜವಾಬ್ದಾರಿಯಿಂದ ತಾವು ನಿರ್ವಹಿಸಬೇಕು. ಸರ್ಕಾರದ ನಿಯಮಗಳನ್ವಯ ಅಗತ್ಯ ದಾಖಲೆಗಳನ್ನು ಪರಿಶೀಲಿಸದೆ ಹೋಂಸ್ಟೇ ಮತ್ತು ರೆಸಾರ್ಟ್‌ಗಳ ಕಟ್ಟಡ ಪರವಾನಗಿ ನೀಡಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಹೇಳಿದರು.

“ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ರೆಸಾರ್ಟ್ ಹಾಗೂ ಹೋಂಸ್ಟೇಗಳು ಇರುವ ಹಾಗಿಲ್ಲ. ಈ ಕುರಿತು ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸರ್ವೆ ಕಾರ್ಯ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಅನಧಿಕೃತ ಮದ್ಯ ಮಾರಾಟ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದರೆ ತಕ್ಷಣ ಅವುಗಳಿಗೆ ಸಂಬಂಧಿಸಿದ ಇಲಾಖೆಯವರು ಕಡಿವಾಣ ಹಾಕಬೇಕು” ಎಂದರು.

“ಹಂಪಿ ಕೆಫೆ, ರಾಖಿ ಮಿಡೋಸ್ ರೆಸಾರ್ಟ್ ಸೇರಿದಂತೆ ಇತರೆ ನಿಯಮ ಉಲ್ಲಂಘನೆ ಮಾಡಿದ ರೆಸಾರ್ಟ್‌ಗಳ ಟ್ರೇಡ್ ಲೈಸೆನ್ಸ್ ಕ್ಯಾನ್ಸಲ್ ಆಗಿರುವ ಕುರಿತು ಮಾಹಿತಿ ನೀಡಿ. ಉಪಲೋಕಾಯುಕ್ತರು ದಾಖಲಿಸಿದ ಸೊಮೊಟೊ ಪ್ರಕರಣಗಳ ರಿಪೋರ್ಟ್‌ಗಳನ್ನು ಕೊಡಬೇಕು” ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಮಾತನಾಡಿ, “ಅಧಿಕಾರಿಗಳು ಯಾವುದೇ ಅನುಮತಿ ನೀಡುವ ಮುಂಚೆ ಎಲ್ಲವನ್ನೂ ಪರಿಶೀಲನೆ ಮಾಡಿ ಕೊಡಬೇಕು. ಇಲ್ಲವಾದರೆ ಕಾನೂನು ಸಮಸ್ಯೆ ಆಗುತ್ತವೆ. ಪೊಲೀಸರು ಕೇಳಿದಾಗ ಅವರು ಆ ಅನುಮತಿ ಪಡೆದಿದ್ದೇವೆ, ಎಂದು ಹೇಳುತ್ತಾರೆ” ಎಂದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular