HomeKarnatakaಯಶಸ್ವಿನಿ ಯೋಜನೆ ಗುರಿ ಸಾಧಿಸುವಲ್ಲಿ ರಾಜ್ಯಕ್ಕೆ ಕೊಪ್ಪಳ ಜಿಲ್ಲೆ ಪ್ರಥಮ

ಯಶಸ್ವಿನಿ ಯೋಜನೆ ಗುರಿ ಸಾಧಿಸುವಲ್ಲಿ ರಾಜ್ಯಕ್ಕೆ ಕೊಪ್ಪಳ ಜಿಲ್ಲೆ ಪ್ರಥಮ

ಕೊಪ್ಪಳ: 2025-26ನೇ ಸಾಲಿಗೆ ಯಶಸ್ವಿನಿ ಯೋಜನೆಯಡಿ ಜಿಲ್ಲೆಗೆ ನೀಡಿದ ಗುರಿ ಸಾಧಿಸುವಲ್ಲಿ ಕೊಪ್ಪಳ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.

2025-26ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಿ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಸರ್ಕಾರವು ಆದೇಶವನ್ನು ಹೊರಡಿಸಿಲಾಗಿತ್ತು. ಅದರಂತೆ ಈ ಯೋಜನೆಯಡಿ ಕೊಪ್ಪಳ ಜಿಲ್ಲೆಗೆ 90 ಸಾವಿರ ಸದಸ್ಯರನ್ನು ನೋಂದಾಯಿಸವ ಗುರಿಯನ್ನು ನಿಗದಿಪಡಿಸಲಾಗಿತ್ತು. ಈ ಗುರಿ ಅನ್ವಯ ಕೊಪ್ಪಳ ಜಿಲ್ಲೆಯು ಶೇ 122 ರಷ್ಟು ಗುರಿ ಸಾಧಿಸಿ, ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುತ್ತದೆ.

ಈ ‎ಗುರಿ ಸಾಧನೆಗೆ ಶ್ರಮಿಸಿದ ಸಹಕಾರ ಕ್ಷೇತ್ರದಲ್ಲಿನ ಎಲ್ಲಾ ಸದಸ್ಯರಿಗೆ, ಸಹಕಾರ ಇಲಾಖಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ, ಆರ್.ಕೆ.ಡಿ.ಸಿ.ಸಿ.ಬ್ಯಾಂಕಿನ ವ್ಯವಸ್ಥಾಪಕರಿಗೆ, ವೃತ್ತ ವೀಕ್ಷಕರಿಗೆ, ಕೆ.ಎಂ.ಎಫ್. ಸಂಸ್ಥೆಯ ಅಧಿಕಾರಿ, ಸಿಬ್ಬಂದಿಗಳಿಗೆ ಹಾಗೂ ಜಿಲ್ಲೆಯ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸಹಕಾರ ಇಲಾಖಾ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular