HomeJobsಗ್ರಾಮ ಒನ್ ಕೇಂದ್ರದಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ

ಗ್ರಾಮ ಒನ್ ಕೇಂದ್ರದಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ

ಕೊಪ್ಪಳ ಜಿಲ್ಲೆಯ 19 ನವೀಕೃತ ಗ್ರೇಡ್-1 ಗ್ರಾಮ ಪಂಚಾಯತಿಗಳ ಗ್ರಾಮ-1 ಕೇಂದ್ರಗಳಲ್ಲಿ ತಲಾ ಒಂದು ಹುದ್ದೆಯಲ್ಲಿ ಕಾರ್ಯನಿರ್ವಹಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು, ಅರ್ಹರು ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನವಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಗ್ರೇಡ್-2 ಯಿಂದ ಗ್ರೇಡ್-1 ನವೀಕರಿಸಲಾದ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕಾರ್ಯ ನಿರ್ವಹಣೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಗಂಗಾವತಿ ತಾಲ್ಲೂಕಿನ ಆನೆಗುಂದಿ ಮತ್ತು ಡಣಾಪುರ, ಕನಕಗಿರಿ ತಾಲ್ಲೂಕಿನ ಚಿಕ್ಕಡನಕನಕಲ್ & ಗೌರಿಪುರ, ಕಾರಟಗಿ ತಾಲ್ಲೂಕಿನ ಚೆಳ್ಳೂರು, ಕೊಪ್ಪಳ ತಾಲ್ಲೂಕಿನ ಬೆಟಗೇರಿ & ಹಾಲವರ್ತಿ, ಕುಕನೂರು ತಾಲ್ಲೂಕಿನ ಬನ್ನಿಕೊಪ್ಪ ಗ್ರಾಮ ಒನ್ ಕೇಂದ್ರಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾನಾಪುರ, ಇಟಗಿ, ಕುದರಿಮೋತಿ & ಮಸಬಹಂಚಿನಾಳ, ಕುಷ್ಟಗಿ ತಾಲ್ಲೂಕಿನ ದೋಡಿಹಾಳ, ಹನುಮನಾಳ, ಕಂದಕುರ, ಕೇಸೂರು, ಲಿಂಗದಹಳ್ಳಿ & ಮುದೇನೂರು ಹಾಗೂ ಯಲಬುರ್ಗಾ ತಾಲ್ಲೂಕಿನ ಹಿರೇಮ್ಯಾಗೇರಿ ಸೇರಿದಂತೆ ಈ ಎಲ್ಲಾ 19 ಗ್ರಾಮ ಪಂಚಾಯತಿಗಳಲ್ಲಿ ಹೊಸದಾಗಿ ಅಧಿಸೂಚನೆಯನ್ನು ಸರ್ಕಾರವು ಹೊರಡಿಸಿರುತ್ತದೆ.

ಪ್ರಯುಕ್ತ, ಆಯಾ ಗ್ರಾಮ ಪಂಚಾಯತಿಗಳಲ್ಲಿನ ಆಸಕ್ತರು ಗ್ರಾಮ-1 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸಿದ್ದಲ್ಲಿ ಮಾರ್ಚ್ 15 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

https://sevasindhuservices.karnataka.gov.in/loginWindow.do ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular