HomeJobsಅಂಚೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅಂಚೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ: ಕೊಪ್ಪಳ ಅಂಚೆ ವಿಭಾಗೀಯ ವ್ಯಾಪ್ತಿಯ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ, ಶಾಖಾ ಅಂಚೆ ಪಾಲಕ ಮತ್ತು ಸಹಾಯಕ ಶಾಖಾ ಅಂಚೆ ಪಾಲಕ ಹುದ್ದೆಗಳಿಗೆ 10ನೇ ತರಗತಿ ಅಂಕಗಳ ಆಧಾರದ ಮೇಲೆ ಒಟ್ಟು 13 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ಶೈಕ್ಷಣಿಕ ಹಾಗೂ ಇತರೆ ಅರ್ಹತಾ ಮಾನದಂಡಗಳನ್ನು ಪೂರೈಸಿ, ಪ್ರಕಟಣೆಯಲ್ಲಿ ಸೂಚಿಸಿರುವ ವೇಳಾಪಟ್ಟಿಯಂತೆ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಆಗಸ್ಟ್ 31 ರಿಂದ ಸೆಪ್ಟೆಂಬರ್ 19 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ, ಕೊಪ್ಪಳ ವಿಭಾಗೀಯ ಅಂಚೆ ಅಧೀಕ್ಷಕರ ಕಚೇರಿ ಹಾಗೂ  https://indiapostgdsonline.gov.in ಸಂಪರ್ಕಿಸುವ ಮೂಲಕ ಅಂಚೆ ಇಲಾಖೆ ಸೇರುವ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ವಿಭಾಗೀಯ ಅಂಚೆ ಅಧೀಕ್ಷಕ ನಾಗರಾಜ ಪಾಟೀಲ ಪ್ರಕಟಣೆ ಮೂಲಕ ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular