HomeKarnatakaದುಡುಕಿನ ನಿರ್ಧಾರ ಕೈಗೊಂಡ ವ್ಯಕ್ತಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿ ಹತ್ಯೆ, ನಂತರ...

ದುಡುಕಿನ ನಿರ್ಧಾರ ಕೈಗೊಂಡ ವ್ಯಕ್ತಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿ ಹತ್ಯೆ, ನಂತರ ಆತ್ಮಹತ್ಯೆ

ಕೊಪ್ಪಳ: ಪತಿಯೇ ಪತ್ನಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ನಡೆದಿದೆ.

ಲಕ್ಕವ್ವ ವಾಲೀಕಾರ(36) ಕೊಲೆಯಾದವರು, ನಿಂಗಪ್ಪ ವಾಲೀಕಾರ(40) ಆತ್ಮಹತ್ಯೆ ಮಾಡಿಕೊಂಡವರು. ಮದ್ಯವ್ಯಸನಿಯಾಗಿ ನಿಂಗಪ್ಪ ಅನೇಕ ಕಡೆ ಸಾಲ ಮಾಡಿಕೊಂಡಿದ್ದ. ನಿತ್ಯವೂ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ಮಂಗಳವಾರ ರಾತ್ರಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ನಿಂಗಪ್ಪ ಬಳಿಕ ಗ್ರಾಮದ ಹೊರವಲಯದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular