HomeKarnatakaಕೊಪ್ಪಳ ನಗರಾಭಿವೃದ್ದಿ ಪ್ರಾಧಿಕಾರದಲ್ಲಿ 8.89 ಕೋಟಿ ರೂ. ನಿವೇಶನ ಹಗರಣ: ಗುತ್ತಿಗೆ ನೌಕರ ದಂಪತಿ ಸೇರಿ...

ಕೊಪ್ಪಳ ನಗರಾಭಿವೃದ್ದಿ ಪ್ರಾಧಿಕಾರದಲ್ಲಿ 8.89 ಕೋಟಿ ರೂ. ನಿವೇಶನ ಹಗರಣ: ಗುತ್ತಿಗೆ ನೌಕರ ದಂಪತಿ ಸೇರಿ ಮೂವರು ಅರೆಸ್ಟ್

ಕೊಪ್ಪಳ: ಕೊಪ್ಪಳ ನಗರಾಭಿವೃದ್ದಿ ಪ್ರಾಧಿಕಾರದಲ್ಲಿನಡೆದಿರುವ ಬರೋಬ್ಬರಿ 8.89 ಕೋಟಿ ರೂ ನಿವೇಶನ ಅಕ್ರಮ ಹಾಗೂ ಹಣ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ, ಪ್ರಾಧಿಕಾರದ ಹೊರಗುತ್ತಿಗೆ ನೌಕರ ಹಾಗೂ ಆತನ ಪತ್ನಿ ಸೇರಿ ಮೂವರನ್ನು ಬಂಧಿಸಲಾಗಿದೆ.

ಪ್ರಾಧಿಕಾರದ ಹೊರಗುತ್ತಿಗೆ ನೌಕರ ರವೀಂದ್ರ ಕುಮಾರ್, ಆತನ ಪತ್ನಿ ರಮಾ ಹಾಗೂ ಸಹೋದರ ಅನಿಲ್ ಕುಮಾರ್‌ ಬಂಧಿತ ಆರೋಪಿಗಳು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಮೊಬೈಲ್ ಬಳಸದೆ ತಮಿಳುನಾಡು, ಮಂತ್ರಾಲಯದ ವಿವಿಧ ದೇವಸ್ಥಾನಗಳಿಗೆ ತೆರಳಿದರು. ರವೀಂದ್ರ ಕುಮಾರ್ ಹಾಗೂ ಆತನ ಪತ್ನಿಯನ್ನು ಚಿತ್ರದುರ್ಗದ ಬಳಿ ಕೊಪ್ಪಳ ನಗರ ಪೊಲೀಸರು ರೋಚಕವಾಗಿ ಖೆಡ್ಡಾಗೆ ಕೆಡವಿದ್ದಾರೆ.

ಕೊಪ್ಪಳದ ಕಿಮ್ಸ್ ಹಿಂಭಾಗದ ಸರೋಜಮ್ಮ ಬಡಾವಣೆಯಲ್ಲಿ ಸೈಟ್ ನೀಡುವುದಾಗಿ ಹೇಳಿ ಜನಸಾಮಾನ್ಯರಿಂದ ಹಣ ವಸೂಲಿ ಮಾಡಲಾಗಿತ್ತು. ಗಂಗಾವತಿಯ ಬನಶಂಕರಿ ಎಂಬ ಮಹಿಳೆ ಹಣ ಕಳೆದುಕೊಂಡು ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದಾಗ, ಅನಧಿಕೃತ ಅಕೌಂಟ್‌ಗಳಿಗೆ ಪ್ರಾಧಿಕಾರದ ಅಧಿಕೃತ ಖಾತೆಯಿಂದಲೇ ಹಣ ವರ್ಗಾವಣೆಯಾಗಿರುವುದು ಬಯಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಡಿಟ್ ರಿಪೋರ್ಟ್ ಪ್ರಕಾರ ಹೊರಗುತ್ತಿಗೆ ನೌಕರ ರವೀಂದ್ರ ಕುಮಾರ್, ಆತನ ಪತ್ನಿ ಹಾಗೂ ಸಹೋದರ ಸೇರಿ ಸುಮಾರು 40ಕ್ಕೂ ಹೆಚ್ಚು ಅಕೌಂಟ್‌ಗಳಿಗೆ ಹಣ ವರ್ಗಾಯಿಸಿಕೊಂಡಿದ್ದ. ರವೀಂದ್ರನ ಸಹೋದರ ಅನಿಲ್ ಕುಮಾರ್ ಹೆಸರಿಗೆ 1.5 ಕೋಟಿ ರೂ.ಗೂ ಅಧಿಕ ಹಣ ವರ್ಗಾವಣೆಯಾಗಿತ್ತು. ಬೆಂಗಳೂರಿನ ಪಿಜಿಯಲ್ಲಿದ್ದ ಈತ ಮಗನಿಗೆ ಕರೆ ಮಾಡಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ಇನ್ನು ರವೀಂದ್ರನ ಪತ್ನಿ ರಮಾ ಅಕೌಂಟ್‌ನಿಂದ 30 ಲಕ್ಷ ರೂ.ಗೂ ಅಧಿಕ ಹಣ ವರ್ಗಾವಣೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಎಸ್.ಪಿ ಡಾ. ರಾಮ್ ಎಲ್. ಅರಸಿದ್ದಿ ಅವರ ನೇತೃತ್ವದಲ್ಲಿ 3 ತನಿಖಾ ತಂಡಗಳನ್ನು ರಚಿಸಲಾಗಿತ್ತು. ಸದ್ಯ ಅನಧಿಕೃತ ಅಕೌಂಟ್‌ನಲ್ಲಿದ್ದ ಸುಮಾರು 3 ಕೋಟಿ ರೂ.ಗೂ ಅಧಿಕ ಹಣವನ್ನು ಪೊಲೀಸರು ಫ್ರೀಜ್ ಮಾಡಿದ್ದಾರೆ. ಇದೇ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಪ್ರಾಧಿಕಾರದ ಮಾಜಿ ಆಯುಕ್ತ ಯೋಗಾನಂದ್ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅವರ ಬಂಧನಕ್ಕಾಗಿಯೂ ಪೊಲೀಸರು ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular