HomeJobsಕೊಪ್ಪಳ ವಿಶ್ವವಿದ್ಯಾಲಯ: ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಹುದ್ದೆಗಳ ನೇಮಕಾತಿ

ಕೊಪ್ಪಳ ವಿಶ್ವವಿದ್ಯಾಲಯ: ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಹುದ್ದೆಗಳ ನೇಮಕಾತಿ

ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯದ ವತಿಯಿಂದ ಗೌರವಧನ ಆಧಾರದ ಮೇಲೆ ಅತಿಥಿ ಸಹಾಯಕ ಗ್ರಂಥಪಾಲಕರು ಹಾಗೂ ತಾಂತ್ರಿಕ ಸಹಾಯಕರ ತಾತ್ಕಾಲಿಕ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಗೌರವಧನ ಆಧಾರದ ಮೇಲೆ 2 ಅತಿಥಿ ಸಹಾಯಕ ಗ್ರಂಥಪಾಲಕರು ಹಾಗೂ 1 ತಾಂತ್ರಿಕ ಸಹಾಯಕ ಗ್ರಂಥಪಾಲಕರ ತಾತ್ಕಾಲಿಕ ಹುದ್ದೆಗಳಿಗೆ ಆಗಸ್ಟ್ 6 ರ ಗುರುವಾರದಂದು ಬೆಳಗ್ಗೆ 11.30 ಗಂಟೆಗೆ ನೇರ ಸಂದರ್ಶನವನ್ನು ಏರ್ಪಡಿಸಲಾಗಿದ್ದು, ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಒಂದು ನಕಲು ಪ್ರತಿಯನ್ನು ನಿಗದಿತ ಸಮಯಕ್ಕೆ ಹಾಜರಾಗಬೇಕು.

ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.koppaluniversity.ac.in ಅನ್ನು ವೀಕ್ಷಿಸಬಹುದು. ಸಂದರ್ಶನಕ್ಕಾಗಿ ಹಾಜರಾಗುವ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಯಾವುದೇ ಭತ್ಯೆಗಳನ್ನು ನೀಡಲಾಗುವುದಿಲ್ಲ ಎಂದು ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular