HomeJobsನಿರುದ್ಯೋಗಿ ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ವಿವಿಧೆಡೆ ಉದ್ಯೋಗ ಅವಕಾಶ ಬಗ್ಗೆ ಇಲ್ಲಿದೆ ಮಾಹಿತಿ

ನಿರುದ್ಯೋಗಿ ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ವಿವಿಧೆಡೆ ಉದ್ಯೋಗ ಅವಕಾಶ ಬಗ್ಗೆ ಇಲ್ಲಿದೆ ಮಾಹಿತಿ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್-ಇಂಟರ್‌ವ್ಯೂವ್ ಅನ್ನು ಆಗಸ್ಟ್ 21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಪಿ.ಯು.ಸಿ ಅಥವಾ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಈ ವಾಕ್ ಇನ್ ಇಂಟರ್‌ವ್ಯೂವ್ ನಲ್ಲಿ ಭಾಗವಹಿಸಬಹುದು. 21 ರಿಂದ 33 ವರ್ಷದ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ (ರೆಜ್ಯುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾತ್ಕಾಲಿಕ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಇಂಗ್ಲೀಷ್ ವಿಷಯ ಶಿಕ್ಷಕ ಹುದ್ದೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ನೇಮಿಸಿಕೊಳ್ಳಲು ಉದ್ದೇಶಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇಂಗ್ಲೀಷ್ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಜೊತೆಗೆ ಬಿ.ಇಡಿ ವಿದ್ಯಾರ್ಹತೆ ಹೊಂದಿದ ಅರ್ಹ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 25 ರೊಳಗಾಗಿ ಮೌಲಾನಾ ಆಜಾದ್ ಮಾದರಿ ಶಾಲೆ, ಕುಷ್ಟಗಿ ಇಲ್ಲಿಗೆ ಬಂದು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9900617290 ಗೆ ಸಂಪರ್ಕಿಸಬಹುದು ಎಂದು ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಗಣಿತ ವಿಷಯ ಶಿಕ್ಷಕ ಹುದ್ದೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ನೇಮಿಸಿಕೊಳ್ಳಲು ಉದ್ದೇಶಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗಣಿತ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಜೊತೆಗೆ ಬಿ.ಇಡಿ ವಿದ್ಯಾರ್ಹತೆ ಹೊಂದಿದ ಅರ್ಹ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 25 ರೊಳಗಾಗಿ ಮೌಲಾನಾ ಆಜಾದ್ ಮಾದರಿ ಶಾಲೆ, ತಾವರಗೇರಾ ಇಲ್ಲಿಗೆ ಬಂದು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9900617290 ಗೆ ಸಂಪರ್ಕಿಸಬಹುದು ಎಂದು ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular