HomeKarnatakaSHOCKING NEWS: ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

SHOCKING NEWS: ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

ಕೊಪ್ಪಳ: ಕೆಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ನಡೆದಿದೆ.

ಅನುಶ್ರೀ ಮಡಿವಾಳರ್ ಎಂಬ 7 ವರ್ಷದ ಬಾಲಕಿ ಮೃತ ದುರ್ದೈವಿ. ಏಪ್ರಿಲ್ 19ರಂದು ಬಾಲಕಿ ಅನುಶ್ರೀ ಮನೆಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಬಳಿಕ ನಾಪತ್ತೆಯಾಗಿದ್ದಳು. ಅಜ್ಜಿಯ ಜೊತೆ ಮನೆಯಲ್ಲಿದ್ದ ಬಾಲಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಕಂಗಾಲಾದ ಹೆತ್ತವರು ಗ್ರಾಮದ ತುಂಬೆಲ್ಲ ಹುಡುಕಾಟ ನಡೆಸಿದ್ದರು. ಎಲ್ಲಿಯೂ ಬಾಲಕಿ ಸುಳಿವಿಲ್ಲದಿದ್ದಾಗ ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಾಲಕಿ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಎಲ್ಲಿಯೂ ಬಾಲಕಿ ಪತ್ತೆಯಾಗಿರಲ್ಲಿಲ್ಲ. ಆದರೆ ಈಗ ಬಾಲಕಿ ಅದೇ ಕಿನ್ನಾಳ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನಾಪತ್ತೆಯಾಗಿದ್ದ ಬಾಲಕಿ ಇದೀಗ ಅದೇ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular