HomeKarnatakaBIG NEWS: ನಾಳೆ ಕೊಪ್ಪಳ ಬಂದ್ ಹಿನ್ನೆಲೆ: ವಿವಿ ಪರೀಕ್ಷೆಗಳು ಮುಂದೂಡಿಕೆ; ಶಾಲಾ-ಕಾಲೇಜಿಗೆ ರಜೆ ಘೋಷಣೆ

BIG NEWS: ನಾಳೆ ಕೊಪ್ಪಳ ಬಂದ್ ಹಿನ್ನೆಲೆ: ವಿವಿ ಪರೀಕ್ಷೆಗಳು ಮುಂದೂಡಿಕೆ; ಶಾಲಾ-ಕಾಲೇಜಿಗೆ ರಜೆ ಘೋಷಣೆ

ಕೊಪ್ಪಳ: ಬಲ್ಡೋಟಾ ಕಾರ್ಖಾನೆ ವಿಸ್ತರಣೆಯನ್ನು ವಿರೋಧಿಸಿ ನಾಳೆ ಫೆಬ್ರವರಿ 24ರಂದು ಕೊಪ್ಪಳ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ನಾಳೆ ಫೆಬ್ರವರಿ 24 ರಂದು ಸ್ವಯಂಪ್ರೇರಿತ ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಪ್ಪಳ ಮತ್ತು ಭಾಗ್ಯನಗರದಲ್ಲಿ ಸ್ವಯಂಪ್ರೇರಿತ ಬಂದ್ ಗೆ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ. ಹೀಗಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬಂದ್‌ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕೊಪ್ಪಳ ಖಾಸಗಿ ಶಾಲೆಗಳ ಒಕ್ಕೂಟವು ನಾಳೆ ಜಿಲ್ಲಾ ಕೇಂದ್ರದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿದೆ.

ಇನ್ನು ಕೊಪ್ಪಳ ವಿಶ್ವವಿದ್ಯಾಲಯವು ನಾಳೆ ನಡೆಯಬೇಕಿದ್ದ ಸ್ನಾತಕೋತ್ತರ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿ ಅಧಿಕೃತ ಆದೇಶ ಹೊರಡಿಸಿದೆ.

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕಳೆದ ವರ್ಷ ಫೆಬ್ರವರಿ 24 ರಂದು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಅಂದು ಶ್ರೀಗಳು ಜಿಲ್ಲೆಯ ಜನಪ್ರತಿನಿಧಿಗಳಿಗೆ ಕಾರ್ಖಾನೆಯನ್ನು ಶಾಶ್ವತವಾಗಿ ನಿಲ್ಲಿಸಲು ಗಡುವು ನೀಡಿದ್ದರು. ಆದರೆ, ಈವರೆಗೆ ಯಾವುದೇ ಶಾಶ್ವತ ಕ್ರಮ ಕೈಗೊಳ್ಳದ ಕಾರಣ, ಕಳೆದ 116 ದಿನಗಳಿಂದ ಜಿಲ್ಲಾ ಬಚಾವೋ ಆಂದೋಲನ ಸಮಿತಿಯು ನಿರಂತರ ಪ್ರತಿಭಟನೆ ನಡೆಸುತ್ತಿದೆ. ಈಗ ಒಂದು ವರ್ಷ ತುಂಬಿದ ನೆನಪಿಗಾಗಿ ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೊಪ್ಪಳ ಜಿಲ್ಲೆ ಸಂಪೂರ್ಣ ಬಂದ್ ಆಗಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular