HomeKarnatakaBIG NEWS: ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕುಳಿತ ಹಿರಿಯ ನಾಗರಿಕರು

BIG NEWS: ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕುಳಿತ ಹಿರಿಯ ನಾಗರಿಕರು

ಕೊಪ್ಪಳ: ರಾಜ್ಯದಲ್ಲಿ ಒಂದೆಡೆ ತೀವ್ರ ಬರಗಾಲ. ಮತ್ತೊಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕೊಪ್ಪಳದ ಬೀಸರಹಳ್ಳಿಯಲ್ಲಿ ಹಿರಿಯ ನಾಗರಿಕರು ಕುಡಿಯುವ ನೀರಿಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಕೊಡ ಹಿಡಿದು ಉಪವಾಸ ಸತ್ಯಾಗ್ರಹ ಆರಂಭಿಸಿರುವ ಹಿರಿಯ ನಾಗರಿಕರು, ತಮ್ಮ ಜೀವ ಹೋದರ್ ಚಿಂತೆ ಇಲ್ಲ, ನೀರು ಸಿಗುವವರೆಗೂ ಸತ್ಯಾಗ್ರಹ ನಿಲ್ಲಿಸಲ್ಲ ಎಂದು ಪಟ್ತು ಹಿಡಿದಿದ್ದಾರೆ.

ಬೀಸರಹಳ್ಳಿ ಗ್ರಾಮದಲ್ಲಿ ಹನಿ ನೀರಿಗೂ ತತ್ವಾರ ಎದುರಾಗಿದೆ. ವಾರಕ್ಕೊಮ್ಮೆಯೂ ಕುಡಿಯುವ ನೀರಿನ ಪೂರೈಕೆ ಇಲ್ಲ. ಅಧಿಕರಿಗಳಿಗೆ ಗ್ರಾಮ ಪಂಚಾಯಿತಿಗಳಿತೆ ಹಲವು ಬಾರಿ ಮನವಿ ಮಾಡಿದರೂ ಅಧಿಕರಿಗಳು ಕ್ಯಾರೇ ಎನ್ನುತ್ತಿಲ್ಲ. ಇದರಿಂದ ಬೇಸತ್ತ ಗ್ರಾಮದ ವೃದ್ಧರು ಉಪವಾಸ ದ್ಸತ್ಯಾಗ್ರಹ ಆರಂಭಿಸಿದ್ದಾರೆ. ಇನ್ನಾದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನ ಹರಿಸುತ್ತಾರಾ? ಕಾದುನೋಡಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular