HomeKarnataka7ನೇ ಕ್ಲಾಸ್ ಪಾಸಾಗಿದ್ರೂ ಭಾಷಾ ವಿಷಯಗಳಲ್ಲಿ ವೀಕ್: ಕನ್ನಡ ಓದಲು, ಬರೆಯಲು ಬಾರದ 7 ಸಾವಿರ...

7ನೇ ಕ್ಲಾಸ್ ಪಾಸಾಗಿದ್ರೂ ಭಾಷಾ ವಿಷಯಗಳಲ್ಲಿ ವೀಕ್: ಕನ್ನಡ ಓದಲು, ಬರೆಯಲು ಬಾರದ 7 ಸಾವಿರ ಮಕ್ಕಳು

ಕೊಪ್ಪಳ: ಏಳನೇ ತರಗತಿ ಪಾಸ್ ಆಗಿದ್ದರೂ ಭಾಷಾ ವಿಷಯಗಳಲ್ಲಿ ಮಕ್ಕಳು ವೀಕ್ ಆಗಿದ್ದಾರೆ. 7,000 ಮಕ್ಕಳಿಗೆ ಓದಲು, ಬರೆಯಲು ಬಾರದೇ ಇರುವುದು ಪತ್ತೆಯಾಗಿದೆ.

ಕೊಪ್ಪಳ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಓದಲು, ಬರೆಯಲು ಬರುತ್ತಿಲ್ಲ. ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಮಕ್ಕಳು ಪ್ರವೇಶ ಪಡೆದುಕೊಂಡಿದ್ದಾರೆ. ಹೈಸ್ಕೂಲ್ ಪ್ರವೇಶ ಸಂದರ್ಭದಲ್ಲಿ ಮಕ್ಕಳನ್ನು ಪರೀಕ್ಷಿಸಿದಾಗ ಈ ವಿಚಾರ ಪತ್ತೆಯಾಗಿದೆ.

ಕಳೆದ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಪರೀಕ್ಷೆ ನಡೆಸಿದಾಗ ಕನ್ನಡ ಓದಲು, ಬರೆಯಲು ಬಾರದೇ ಇರುವುದು ಗೊತ್ತಾಗಿದ್ದು, ಈ ಕಾರಣಕ್ಕೆ ಎಸ್‌ಎಸ್‌ಎಲ್‌ಸಿಯಲ್ಲಿ ಫಲಿತಾಂಶ ಕಡಿಮೆ ಬರುತ್ತಿದೆ ಎಂದು ಶಿಕ್ಷಕರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದನ್ನು ಗಂಭೀರವಾಗಿ ಪರಿಗಣಿಸಿದ ಶಿಕ್ಷಣ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಕೊಪ್ಪಳ ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಕೊಪ್ಪಳ ಡಿಡಿಪಿಐ ಶ್ರೀಶೈಲ ಬಿರಾದಾರ ಪತ್ರ ಬರೆದು 7ನೇ ತರಗತಿ ಮಕ್ಕಳಿಗೆ ಓದಲು ಬರೆಯಲು ಬರುವಂತೆ ನೋಡಿಕೊಳ್ಳಿ. ಮಕ್ಕಳು ನಿಗದಿತ ಗುರಿ ತಲುಪದೇ ಇದ್ದರೆ ನಿಮ್ಮ ವಾರ್ಷಿಕ ಬಡ್ತಿಗೆ ತಡೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular