ಕೊಪ್ಪಳ: ಮನೆಯಲ್ಲಿ ಅಡುಗೆ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳದಲ್ಲಿ ಈ ಅವಘಡ ಸಂಭವಿಸಿದೆ. ಇಂದು ಬೆಳಿಗ್ಗೆ ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡಿದ್ದು, 7 ಜನರು ಗಾಯಗೊಂಡಿದ್ದಾರೆ. ಮನೆ ಕೂಡ ಹಾನಿಯಾಗಿದೆ.
ರಾಜು, ದುರಗೆಪ್ಪ, ಸುರೇಶ್, ಹುಸೇನಮ್ಮ, ನಾಗರಾಜ್, ವಿಷ್ಣು, ಶ್ರೀಕಾಂತ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.
