HomeKarnatakaಡ್ಯಾನ್ಸ್ ಮಾಡಬೇಡ ಎಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಡ್ಯಾನ್ಸ್ ಮಾಡಬೇಡ ಎಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಕೊಪ್ಪಳ: ಡ್ಯಾನ್ಸ್ ಮಾಡಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಅಗಳಗೇರಿ ಗ್ರಾಮದಲ್ಲಿ ನಡೆದಿದೆ.

16 ವರ್ಷದ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಡ್ಯಾನ್ಸ್ ಮಾಡಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

(ಹಕ್ಕುತ್ಯಾಗ: ಈ ಲೇಖನವು ಯಾವುದೇ ರೂಪದಲ್ಲಿ ಸ್ವಯಂ-ಹಾನಿ ಅಥವಾ ಆತ್ಮಹತ್ಯೆಯನ್ನು ಉತ್ತೇಜಿಸಲು, ಪ್ರೋತ್ಸಾಹಿಸಲು ಅಥವಾ ಸಂವೇದನಾಶೀಲಗೊಳಿಸಲು ಉದ್ದೇಶಿಸಿಲ್ಲ. ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಭಾವನಾತ್ಮಕ ಯಾತನೆ, ಆತ್ಮಹತ್ಯಾ ಆಲೋಚನೆಗಳು ಅಥವಾ ಮಾನಸಿಕ ಆರೋಗ್ಯ ಬಿಕ್ಕಟ್ಟನ್ನು ಅನುಭವಿಸುತ್ತಿದ್ದರೆ, ದಯವಿಟ್ಟು ತಕ್ಷಣದ ವೃತ್ತಿಪರ ಸಹಾಯವನ್ನು ಪಡೆಯಿರಿ. ಭಾರತದಲ್ಲಿ, ನೀವು AASRA (24/7) ಅನ್ನು ಸಂಪರ್ಕಿಸಬಹುದು: 91-9820466726 ಅಥವಾ ವಿಶ್ವಾಸಾರ್ಹ ಮಾನಸಿಕ ಆರೋಗ್ಯ ವೃತ್ತಿಪರರು, ವೈದ್ಯರು ಅಥವಾ ಸ್ಥಳೀಯ ತುರ್ತು ಸೇವೆಗಳನ್ನು ಸಂಪರ್ಕಿಸಬಹುದು.)

ಯುವಕನಿಗೆ ಚಾಕು ಇರಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಹಳಿಯಾಳದ ಕುಸ್ತಿ ಅಖಾಡ ಬಳಿ ಘಟನೆ ನಡೆದಿದೆ.

 ಭಜಂತ್ರಿ ಗಲ್ಲಿಯ ಭರತ್ ಮೋರೆ(29) ಎಂಬವರಿಗೆ ಚಾಕುವಿನಿಂದ ಇರಿದು ಘಟನಾ ಸ್ಥಳದಿಂದ ಆರೋಪಿ ಪರಾರಿಯಾಗಿದ್ದಾನೆ. ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ ನಡೆದು ಚಾಕುವಿನಿಂದ ಇರಿಯಲಾಗಿದೆ. ಯುವಕ ಭರತ್ ಮೋರೆ ಅವರ ಕಿವಿ ಮತ್ತು ಭುಜಕ್ಕೆ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗಾಗಿ ಯುವಕನನ್ನು ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಳಿಯಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ.

ಕೊಪ್ಪಳ: ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು  ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ  (ಸಿಡಾಕ್) ಇವರ ಸಂಯುಕ್ತಾಶ್ರಯದಲ್ಲಿ  ಗಂಗಾವತಿಯಲ್ಲಿ ಪ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ಬಗ್ಗೆ 24 ದಿನಗಳ ಕೌಶಲ್ಯಾಧಾರಿತ ತರಬೇತಿಯನ್ನು  ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ ಆಯಾ ವೃತ್ತಿಗಳಲ್ಲಿ ಕೌಶಲ್ಯದ ಪ್ರಾಯೋಗಿಕ ಹಾಗೂ ಸಿದ್ಧಾಂತದೊಂದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವದು ಮತ್ತು ಸಂಬಂಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ ಹಾಗೂ ಮಾಹಿತಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವುದು. ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಅರ್ಹರಿಗೆ ಸರ್ಕಾರಿ ಯೋಜನೆ ಅಡಿಯಲ್ಲಿ ಬ್ಯಾಂಕ್ ಸಾಲ ಸೌಲಭ್ಯಕ್ಕಾಗಿ ಶಿಫಾರಸ್ಸು ಮಾಡಲಾಗುವದು.

ತರಬೇತಿಯಲ್ಲಿ ಭಾಗವಹಿಸಲು 18 ರಿಂದ 35 ವರ್ಷದವರಾಗಿರಬೇಕು. ಕನಿಷ್ಠ SSLC ಪಾಸ್ ಆದ ಪರಿಶಿಷ್ಟ ಪಂಗಡದ (ST) ಮಹಿಳಾ ಅಭ್ಯರ್ಥಿಗಳು ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಆಸಕ್ತರು ಸೆಪ್ಟೆಂಬರ್ 28 ರೊಳಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ನಗರ ಸಭೆ ಎದುರು, ಕೊಪ್ಪಳ 583231 ಇಲ್ಲಿಗೆ  ಭೇಟಿ ನೀಡಬಹುದು ಅಥವಾ ಮೊಬೈಲ್ ಸಂಖ್ಯೆ 7204016012 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular