HomeLatest NewsBIG NEWS: ಕೊಪ್ಪಳ ಲವ್ ಜಿಹಾದ್ ಆರೋಪಿಗೆ ಅಂತರಾಜ್ಯ ಮಟ್ಕಾ ಬುಕ್ಕಿಗಳ ನಂಟು

BIG NEWS: ಕೊಪ್ಪಳ ಲವ್ ಜಿಹಾದ್ ಆರೋಪಿಗೆ ಅಂತರಾಜ್ಯ ಮಟ್ಕಾ ಬುಕ್ಕಿಗಳ ನಂಟು

ಕೊಪ್ಪಳ: ಕೊಪ್ಪಳ ಲವ್ ಜಿಹಾದ್ ಪ್ರಕರಣದ ಆರೋಪಿ ಮುಸ್ತಾಫಾ ಖಾದ್ರಿಗೆ ಅಂತರಾಜ್ಯ ಮಟ್ಕಾ ಬುಕ್ಕಿಗಳ ನಂಟು ಇರುವುದು ತನಿಖೆಯಲ್ಲಿ ಬಯಲಾಗಿದೆ.

ಮುಂಬೈ ಮತ್ತು ಗೋವಾ ಬುಕ್ಕಿಗಳಿಂದ ಸಿಗುತ್ತಿದ್ದ ಹಣದ ನೆರವಿನಿಂದಲೇ ಈತ ಐಷಾರಾಮಿ ಜೀವನ ನಡೆಸುತ್ತಿದ್ದ ಎನ್ನಲಾಗಿದ್ದು, ಈತನ ಮೊಬೈಲ್‌ನಲ್ಲಿ ಪತ್ತೆಯಾಗಿರುವ ಅಶ್ಲೀಲ ವಿಡಿಯೋಗಳ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ನಿವಾಸಿಯಾಗಿರುವ ಮುಸ್ತಾಫಾ ಖಾದ್ರಿ, ಗೋವಾ ಮತ್ತು ಮುಂಬೈನ ಪ್ರಭಾವಿ ಮಟ್ಕಾ ಬುಕ್ಕಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎಂದು ತಿಳಿದುಬಂದಿದೆ. ಅವರಿಂದ ಬರುತ್ತಿದ್ದ ಹಣದ ಸಹಾಯದಿಂದಲೇ ಈತ ಕೊಪ್ಪಳದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ. ಇದೇ ಹಣದ ಬಲದಿಂದ ಅಮಾಯಕ ಹುಡುಗಿಯರನ್ನು ಬಲೆಗೆಬೀಳಿಸಿ ಮೋಜು-ಮಸ್ತಿ ಮಾಡುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಕೊಪ್ಪಳದಲ್ಲಿ ಇತ್ತೀಚೆಗೆ ಮುಸ್ತಾಫಾ ಖಾದ್ರಿ ಎಂಬಾತ ಹಿಂದೂ ಹುಡುಗಿಯರನ್ನು ಪ್ರೀತಿಸುವ ನಾಟಕವಾಡಿ ವಂಚಿಸುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಈತನ ಮೊಬೈಲ್‌ನಲ್ಲಿ ಅನೇಕ ಹುಡುಗಿಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಮತ್ತು ಫೋಟೋಗಳು ಪತ್ತೆಯಾಗಿದ್ದವು. ಈ ವಿಡಿಯೋಗಳನ್ನು ಇಟ್ಟುಕೊಂಡು ಆತ ಹುಡುಗಿಯರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂಬ ಮಾತುಗಳು ಕೇಳಿಬಂದಿದ್ದವು. ಈ ವಿಚಾರ ತಿಳಿಯುತ್ತಿದ್ದಂತೆಯೇ ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದವು. ಇದಾದ ಬೆನ್ನಲ್ಲೇ ಸಂತ್ರಸ್ತ ಯುವತಿಯೊಬ್ಬಳು ಮುಸ್ತಾಫಾ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದಾಳೆ.

ಆರೋಪಿಯ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದಾಗ 16 ಹಿಂದೂ ಯುವತಿಯರ ಅಶ್ಲೀಲ ಫೋಟೋಗಳು ಪತ್ತೆಯಾಗಿವೆ.

ಇದಕ್ಕೂ ಮುನ್ನ ಮುಸ್ತಫಾ ಖಾದ್ರಿ ಕೊಪ್ಪಳದ ಜಿಲ್ಲಾಸ್ಪತ್ರೆ ಆವರಣದಲ್ಲಿ ವಿದ್ಯಾರ್ಥಿನಿಯೊಂದಿಗೆ ಸಂಶಯಾಸ್ಪದ ಹಾಗೂ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ದೂರು ಬಂದಿತ್ತು. ಆಗ ಯುವಕನ ಮೊಬೈಲ್ ವಶಕ್ಕೆ ಪಡೆದು ನೋಡಿದಾಗ ಒಂದು ಫೋನ್ ನಲ್ಲಿ 3 ಸಾವಿರಕ್ಕೂ ಹೆಚ್ಚು ಅಶೀಲ ಫೋಟೋಗಳು, ಮತ್ತೊಖ್ದು ಫೋನ್ ನಲ್ಲಿ 6 ಸಾವಿರಕ್ಕೂ ಹೆಚ್ಚು ವಿಡಿಯೋಗಳು ಪತ್ತೆಯಾಗಿವೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ.ಸಂಗಮೇಶ ಹಿರೇಮಠ ದೂರು ನೀಡಿದ್ದಾರೆ. ಸದ್ಯ ಮುಸ್ತಫಾ ಖಾದ್ರಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular