HomeLive Newsಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ: 7 ಆರೋಪಿಗಳು ಅರೆಸ್ಟ್

ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ: 7 ಆರೋಪಿಗಳು ಅರೆಸ್ಟ್

ಕೊಪ್ಪಳ: ಬೇಕರಿಗೆ ನುಗ್ಗಿದ ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ.

ಚನ್ನಪ್ಪ ಹುಸೇನಪ್ಪ ನಾರಿಹಾಳ (35) ಕೊಲೆಯಾದ ವ್ಯಕ್ತಿ. ಹಳೆ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ನಿನ್ನೆ ಬೇಕರಿಗೆ ನುಗ್ಗಿ, ಚನ್ನಪ್ಪ ಅವರನ್ನು ಬೇಕರಿಯಿಂದ ಹೊರಗೆಳೆದು ತಂದು ಮನಬಂದಂತೆ ಮಾರಕಾಸ್ತ್ರಗಳಿಂದ ಹೊಡೆದು ಸಾಯಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಕೊಲೆ ಪ್ರಕರಣ ಸಂಬಂಧ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಮೂವರ ಬಂಧನಕ್ಕಾಗಿ ಬಲೆ ಬೀಸಲಾಗಿದೆ. 20 ವರ್ಷಗಳ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular