HomeKarnatakaಲೇಔಟ್ ಪರವಾನಿಗೆಗೆ ಲಂಚಕ್ಕೆ ಬೇಡಿಕೆ; ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಲೇಔಟ್ ಪರವಾನಿಗೆಗೆ ಲಂಚಕ್ಕೆ ಬೇಡಿಕೆ; ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಕೊಪ್ಪಳ: ಲೇಔಟ್ ಪರವಾನಿಗೆ ನೀಡಲು ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ರಮೇಶ್ ಬಸವನಗೌಡ ಬಂಧಿತ ಅಧಿಕಾರಿ. ರಮೇಶ್ ಕೊಪ್ಪಳ ನಗರ ಹಾಗೂ ಗ್ರಾಮಾಂತರ ಯೋಜನೆ ಇಲಾಖೆಯ ಅಧಿಕಾರಿ. ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿಯೇ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಕನೂರ ಮೂಲದ ರವಿಚಂದ್ರ ಎಂಬುವವರ ಬಳಿ ಲಂಚಕ್ಕಾಗಿ ರಮೇಶ್ ಬೇಡಿಕೆ ಇಟ್ಟಿದ್ದರು. ಮೂರು ಲಕ್ಷ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಕೊಪ್ಪಳ ಲೋಕಾಯುಕ್ತ ಎಸ್ ಪಿ ಸುನೀಲ್ ಮೇಗಲಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular