HomeKarnatakaBIG NEWS: ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ಪೊಲೀಸರ ದಿಢೀರ್ ದಾಳಿ

BIG NEWS: ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ಪೊಲೀಸರ ದಿಢೀರ್ ದಾಳಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಪೊಲೀಸರು ಜಿಲ್ಲೆಯಲ್ಲಿರುವ ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ಗಂಗಾವತಿ ಸುತಮುತ್ತಲಿನ ಹೋಂ ಸ್ಟೇ, ರೆಸಾರ್ಟ್, ಹೋಟೆಲ್ ಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವಿದೇಶಿಗರ ಮಾಹಿತಿಯನ್ನು ನೀಡದಿರುವುದು ಮತ್ತು ಅಕ್ರಮ ಚಟುವಟಿಕೆಗಳ ಆರೋಪದ ಮೇರೆಗೆ ಈ ದಾಳಿ ನಡೆದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ ರಿಜಿಸ್ಟರ್ ಪುಸ್ತಕ, ವಿವಿಧ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಚಟುವಟಿಕೆಗಳನ್ನು ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular