HomeKarnatakaಭಾರಿ ಮಳೆಗೆ ಕುಸಿದ ಮನೆಯ ಮೇಲ್ಛಾವಣಿ: ಮಣ್ಣಿನಡಿ ಸಿಲುಕಿ ನರಳಾಡುತ್ತಿದ್ದ ವ್ಯಕ್ತಿಯ ರಕ್ಷಣೆ

ಭಾರಿ ಮಳೆಗೆ ಕುಸಿದ ಮನೆಯ ಮೇಲ್ಛಾವಣಿ: ಮಣ್ಣಿನಡಿ ಸಿಲುಕಿ ನರಳಾಡುತ್ತಿದ್ದ ವ್ಯಕ್ತಿಯ ರಕ್ಷಣೆ

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಧಾರಾಕಾರ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ವ್ಯಕ್ತಿಯೋರ್ವ ಮಣ್ಣಿನಡಿ ಸಿಲುಕಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಢಾಣಾಪುರ ಗ್ರಮದಲ್ಲಿ ನಡೆದಿದೆ.

ಪ್ರಕಾಶ್ ಮಣ್ಣಿನಡಿ ಸಿಲುಕಿರುವ ವ್ಯಕಿ. ಮಣ್ಣಿನಡಿ ಸಿಲುಕಿ ನರಳಾಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಗಂಗಾವತಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ವ್ಯಕ್ತಿಯ ದೇಹದ ಮುಕ್ಕಾಲು ಭಾಗ ಮಣ್ಣಿನಲ್ಲಿ ಹೂತು ಹೋಗಿತ್ತು. ಸ್ಥಳೀಯರು ಹರಸಾಹಸಪಟ್ಟು ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular