ಕೊಪ್ಪಳ: ಮಗಳಿಗೆ ರಕ್ಷನಾಗಬೇಕಿದ್ದ ತಂದೆಯೇ ಮಗಳನ್ನು ಸ್ನೇಹಿತನ ಮನೆಗೆ ಕರೆದೊಯ್ದು, ಆಕೆಯ ಮೇಲೆ ಅತ್ಯಾಚಾರವೆಸಗುವಂತೆ ಕುಮ್ಮಕ್ಕು ನೀಡಿರುವ ವಿಕೃತ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಅಪ್ರಾಪ್ತ ಮಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಂದೆ ಹಾಗೂ ಆತನ ಸ್ನೇಹಿತನ ವಿರುದ್ಧ ಮಗಳು ದೂರು ದಾಖಲಿಸಿದ್ದಾಳೆ.
ತಂದೆ ತನ್ನನ್ನು ತನ್ನ ಸ್ನೇಹಿತನ ಮನೆಗೆ ಕರೆದೊಯ್ದಿದ್ದ. ಈ ವೇಳೆ ಸ್ನೇಹಿತನಿಗೆ ಮಗಳ ಮೇಲೆ ಅತ್ಯಾಚಾರ ನಡೆಸುವಂತೆ ಪರೋಕ್ಷವಾಗಿ ತಂದೆ ಕುಮ್ಮಕ್ಕು ನೀಡಿದ್ದು, ಅತ್ಯಾಚಾರಕ್ಕೆ ಯತ್ನ ನಡೆದಿದೆ. ಗಾಬರಿಗೊಂಡು ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾಗಿ ತಿಳಿಸಿದ್ದಾಳೆ.
ಬಾಲಕಿ ನೀಡಿದ ದೂರುನ ಮೇರೆಗೆ ಪೋಕ್ಸೋ ಕೇಸ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
