ಕೊಪ್ಪಳ: ಪಾರ್ಟಿಯಲ್ಲಿ ಸ್ಪಿರೀಟ್ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿದ್ದ ನಾಲ್ವರಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕೂಕನಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಫೆಬ್ರವರಿ 4೪ರಂದು ಕೂಕನಳ್ಳಿಯಲ್ಲಿ ಪಾರ್ಟಿ ಮಾಡಿದ್ದ ನಾಲ್ಕೈದು ಯುವಕರು ಸ್ಪಿರೀಟ್ ಕುಡಿದಿದ್ದರು. ಸ್ಪಿರೀಟ್ ಸೇವಿಸಿದ್ದ ನಾಲ್ವರು ಯುವಕರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು.
ನಾಲ್ವರನ್ನೂ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಇದೀಗ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಯುವಕ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪಿದ್ದಾರೆ.
ರಮೇಶ್ ಹೊಸಹಳ್ಳಿ (24) ಹಾಗೂ ಅಮರಯ್ಯ ಹಿರೇಮಠ ಮೃತ ದುರ್ದೈವಿಗಳು. ಇನ್ನೋರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಮುಂದುವರೆದಿದೆ. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

