HomeKarnatakaBIG NEWS: ಶಾಲಾ ಮಕ್ಕಳ ಮೇಲೆ ಬೀದಿನಾಯಿಗಳ ದಾಳಿ: ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

BIG NEWS: ಶಾಲಾ ಮಕ್ಕಳ ಮೇಲೆ ಬೀದಿನಾಯಿಗಳ ದಾಳಿ: ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕೊಪ್ಪಳ: ಶಾಲಾ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪಳದ ದಿನ್ನಾರ್ ಬಡಾವಣೆ, ಕನಕಗಿರಿ ಬಡಾವಣೆಗಳಲ್ಲಿ ಬೀದಿನಾಯಿಗಳು ಶಾಲೆ ಮಕ್ಕಳ ಮೇಲೆ ದಾಳಿ ನಡೆಸಿದ್ದು, ಮೂವರು ವಿದ್ಯಾರ್ಥಿಗಳನ್ನು ಕಚ್ಚಿ ಗಾಯಗೊಳಿಸಿವೆ.

ಅಬ್ರಾರ್, ಫರ್ಹಾನ್ ಹಾಗೂ ಮಂಜು ಎಂಬ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಮೂವರನ್ನೂ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಪ್ಪಳ ಜಿಲ್ಲೆಯಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ವಿದ್ಯಾರ್ಥಿಗಳು ಶಾಲೆಗೆ ಹೋಗಲು ಭಯಪಡಬೇಕಾದ ಸ್ಥಿತಿ ಇದೆ. ಮಕ್ಕಳ ಮೇಲೆ ಬೀದಿನಾಯಿಗಳು ಪದೇ ಪದೆ ದಾಲಿ ನಡೆಸುತ್ತಿದ್ದರೂ ನಗರಸಭೆ ಅಧಿಕಾರಿಗಳು ಬೀದಿನಾಯಿಗಳಿಗೆ ಕಡಿವಾಣ ಹಾಕುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular