HomeKarnatakaBREAKING: 5 ವರ್ಷದ ಮಗಳ ಜೊತೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ತಾಯಿ: ಮಹಿಳೆ ಸಾವು;...

BREAKING: 5 ವರ್ಷದ ಮಗಳ ಜೊತೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ತಾಯಿ: ಮಹಿಳೆ ಸಾವು; ಬಾಲಕಿ ಸ್ಥಿತಿ ಗಂಭೀರ

ಕೊಪ್ಪಳ: ಕೌಟುಂಬಿಕ ಕಲಹಕ್ಕೆ ನೊಂದ ಮಹಿಳೆ 5 ವರ್ಷದ ಮಗಳ ಜೊತೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ನಡೆದಿದೆ.

ಸುಮಂಗಲಾ ಮೃತ ಮಹಿಳೆ. 5 ವರ್ಷದ ಮಗಳ ಸ್ಥಿತಿ ಗಂಭೀರವಾಗಿದೆ. ಗಾಯಾಳು ಮಗುವನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಮಹಿಳೆ ಸುಮಂಗಲಾಗೆ ಪತಿ ಕಿರುಕುಳ ನೀಡುತ್ತಿದ್ದನಂತೆ. ಪತಿಯ ಹಿಂಸೆಗೆ ಮನನೊಂದ ಸುಮಂಗಲ, ಪುಟ್ಟ ಮಗಳೊಂದಿಗೆ ಸೇರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular