ಕೊಪ್ಪಳ: ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಮರವೊಂದು ರಸ್ತೆಯ ಮೇಲೆ ಉರುಳಿ ಬಿದ್ದಿದ್ದು, ವೇಗವಾಗಿ ಬಂದ ಬೈಕ್ ಸವಾರ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ,
ಕೊಪ್ಪಳ ಜಿಲ್ಲೆಯ ಕಾಮನೂರ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಮೃತ ಯುವಕನನ್ನು ಕಿರಣ್ ಕರಬಡಗಿ (30) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುವನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಯುವಕರಿಬ್ಬರು ಬೈಕ್ ನಲ್ಲಿ ವಿಜಯನಗರದ ಮರಿಯಮ್ಮ ಹಳ್ಲಿಗೆ ಕೆಲಸಕ್ಕಾಗಿ ಹೋಗುತ್ತಿದ್ದರು, ಈ ವೇಳೆ ಅಪಘಾತ ಸಂಭವಿಸಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

