HomeKarnatakaBIG NEWS: ಬಲ್ಡೋಟಾ ಕಾರ್ಖಾನೆ ವಿರೋಧಿಸಿ ಭುಗಿಲೆದ್ದ ಪ್ರತಿಭಟನೆ: ಕೊಪ್ಪಳದಲ್ಲಿ ಸರ್ಕಾರದ ಶವಯಾತ್ರೆ ನಡೆಸಿದ ರೈತರು

BIG NEWS: ಬಲ್ಡೋಟಾ ಕಾರ್ಖಾನೆ ವಿರೋಧಿಸಿ ಭುಗಿಲೆದ್ದ ಪ್ರತಿಭಟನೆ: ಕೊಪ್ಪಳದಲ್ಲಿ ಸರ್ಕಾರದ ಶವಯಾತ್ರೆ ನಡೆಸಿದ ರೈತರು

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆ ವಿರೋಧಿಸಿ ರೈತರು ಮತ್ತು ವಿವಿಧ ಸಂಘಟನೆಗಳು ಕರೆ ನೀಡಿರುವ ಕೊಪ್ಪಳ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರೈತ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ರೈತರು ತಾವು ಬೆಳೆದ ಬೆಳೆಗಳನ್ನು ಟ್ರ್ಯಾಕ್ಟರ್ ಗಳಲ್ಲಿ ತಂದು ಪ್ರತಿಭಟನೆ ನಡೆಸಿದ್ದಾರೆ.

ಕಾರ್ಖಾನೆಯಿಂದ ಹೊರಬರುವ ಹೊಗೆ ಮತ್ತು ಧೂಳಿನಿಂದಾಗಿ ತಮ್ಮ ಬೆಳೆಗಳು ಹಾಳಾಗುತ್ತಿವೆ ಎಂದು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಗವಿಮಠದ ಆವರಣದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಕಡಲೆ, ಮೆಕ್ಕೆಜೋಳ, ಜೋಳ ಸೇರಿದಂತೆ ಹಲವು ಬೆಳೆಗಳಿಗೆ ಕಾರ್ಖಾನೆಯ ಹೊಗೆಯಿಂದಾಗುವ ಹಾನಿಯನ್ನು ಪ್ರದರ್ಶಿಸಲು, ಹಾಳಾದ ಬೆಳೆಗಳನ್ನು ಎತ್ತಿನ ಬಂಡಿಗಳಲ್ಲಿ ಹೊತ್ತು ತಂದಿದ್ದಾರೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆ ಎದುರಿಸುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ತೊಟ್ಟಿಲು ಸಮೇತ ಆಗಮಿಸಿದ ಮಹಿಳೆಯರು ಕಾರ್ಖಾನೆಗಳ ಹೊಗೆಯಿಂದ ಮಕ್ಕಳಾಗುತ್ತಿಲ್ಲವೆಂದು ಖಾಲಿ ತೊಟ್ಟಿಲು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ಮಹಿಳೆಯರಿಗೆ ಗರ್ಭಪಾತವಾಗಿದೆ, ನಮಗೆ ಸಂತಾನವಿಲ್ಲ. ಮನೆಯಲ್ಲಿ ತೊಟ್ಟಿಲು ತೂಗೋಕೆ ಆಗುತ್ತಿಲ್ಲವೆಂದು ಅಳಲು ತೋಡಿಕೊಂಡಿದ್ದಾರೆ.

ಮತ್ತೊಂದೆಡೆ ಆಕ್ಸಿಜನ್ ಮಾಸ್ಕ್ ಸಮೇತ ರೈತನೋರ್ವ ಪ್ರತಿಭಟನೆಗೆ ಆಗಮಿಸಿರೋದು ಗಮನ ಸೆಳೆದಿದೆ. ಆಕ್ಸಿಜನ್ ಮಾಸ್ಕ್ ಧರಿಸಿ ಹೋರಾಟದಲ್ಲಿ ಭಾಗಿಯಾಗಿರುವ ಹಿರೇಬಗನಾಳದ ರೈತ ಮಂಜುನಾಥ, ಕಾರ್ಖಾನೆಗಳಿಂದ ಬರುವ ಹೊಗೆಯಿಂದ ಉಸಿರಾಡಲು ಆಗುತ್ತಿಲ್ಲ ಎಂದು ದೂರಿದ್ದಾರೆ.

ಟ್ರ್ಯಾಕ್ಟರ್​ಗಳಲ್ಲಿ ಆಗಮಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತರು ಕೊಪ್ಪಳದ ಬಸವೇಶ್ವರ ವೃತ್ತದಲ್ಲಿ ಸರ್ಕಾರದ ಶವಯಾತ್ರೆ ನಡೆಸಿದ್ದಾರೆ. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಕೂಡ ಭಾಗಿಯಾಗಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಸ್ಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular