ಕೊಪ್ಪಳ: ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣ ಹಾಗೂ ಪ್ರಧಾನಿ ನರೇಂದ್ರ ಮೋದಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ ಖಂಡಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.
ವಿವಿಧ ಜಿಲ್ಲೆಗಳಲ್ಲಿ ಬಿಜೆಪೊ ಕಾರ್ಯರ್ತರು ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳದಲ್ಲಿ ನಡೆದ ಬಿಜೆಪಿ ನಾಯಕರ ಪ್ರತಿಭಟನೆ ತೀರ್ವ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ಕಾರ್ಯಕರ್ತರು, ನಾಯಕರು ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರ ಮೇಲೆ ಮೊಟ್ಟೆ ಎಸೆದ ಕ್ರಮ ಖಂಡಿಸಿ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಇದೇ ವೇಳೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನೆ ಇನ್ನಷ್ಟು ತೀವ್ರಗೊಂಡಿದ್ದು, ಕೊಪ್ಪಳ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದರು. ಈ ವೇಳೆ ಪೊಲೀಸರು ತಡೆಯೊಡ್ಡಿದ್ದಾರೆ. ಇದರಿಂದ ಕೋಪಗೊಂಡ ಬಿಜೆಪಿ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯರ್ ಅವರು ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದಿರುವ ಪ್ರಸಂಗ ನಡೆದಿದೆ.

