HomeLive Newsಜನಾರ್ಧನ ರೆಡ್ಡಿ, ಶ್ರೀರಾಮುಲು ಪೊಲೀಸ್ ವಶಕ್ಕೆ

ಜನಾರ್ಧನ ರೆಡ್ಡಿ, ಶ್ರೀರಾಮುಲು ಪೊಲೀಸ್ ವಶಕ್ಕೆ

ಕೊಪ್ಪಳ: ಇತ್ತ ಕಾವೇರಿ ಕೊಳ್ಳ, ಮಂಡ್ಯ ಭಾಗದಲ್ಲಿ ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ರೈತರು, ಕನ್ನಡಪರ ಸಂಘಟನೆ, ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದರೆ ಅತ್ತ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿಯೂ ರೈತರು ಹಾಗೂ ಬಿಜೆಪಿ ನಾಯಕರು ತುಂಗಭದ್ರಾ ಜಲಾಶಯದಿಂದ ನೀರು ಬಿಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದಾರೆ.

ಮಾಅಜಿ ಸಚಿವರಾದ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು, ರೈತರು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿ ತುಂಗಭದ್ರಾ ಜಲಾಶಯದಿಂದ ನೀರು ಬಿಡುವಂತೆ ಆಗ್ರಹಿಸಿ ಪ್ರತಿಭಟನೆ ತೀವ್ರಗೊಳೀಸಿದ್ದಾರೆ. ನೀರಾವರಿ ವಲಯ ಕಚೇರಿಗೆ ನುಗ್ಗಲು ಯತ್ನಿಸಿದ್ದಾರೆ.

ಮುನಿರಾಬಾದ್ ನಲ್ಲಿರುವ ನೀರಾವರಿ ವಲಯ ಕಚೇರಿಗೆ ಮುತ್ತಿಗೆ ಹಾಕಿ ನೀರು ಬಿಡಿವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಕಚೇರಿಯತ್ತ ಮುನ್ನುಗ್ಗುತ್ತಿದ್ದ ಬಿಜೆಪಿ ನಾಯಕರನ್ನು, ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಾಹನಕ್ಕೆ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಮತ್ತೊಂದೆಡೆ ಬಿಜೆಪಿ ನಾಯಕರು ನೀರಾವರಿ ಕಚೇರಿಯತ್ತ ಮುನ್ನುಗ್ಗುತ್ತಿದ್ದಂತೆ ಪೊಲೀಸರು ಶಾಸಕ ಜನಾರ್ಧನ ರೆಡ್ಡಿ, ಶ್ರೀರಾಮುಲು ಹಾಗೂ ಹಲವು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular