ಕೊಪ್ಪಳ: ಇಬ್ಬರು ಪುತ್ರಿಯರ ಜೊತೆ ಸೇರಿ ಕೆರೆಗೆ ಹಾರಿ ತಾಯಿ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಾರನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಹೆಣ್ಣುಮಕ್ಕಳು ಹಾಗೂ ತಾಯಿ ಮೂವರು ಕೆರೆಗೆ ಹಾರಿ ಸಾವಿಗೆ ಶರಣಾಗಿದ್ದಾರೆ.
ತಾಯಿ ಬಾಳವ್ವ (35) ಹಾಗೂ ಮಕ್ಕಳಾದ ಹುಲಿಗೆವ್ವ (9), ವಿಜಯಮ್ಮ (1) ಮೃತ ದುರ್ದೈವಿಗಳು. ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಬಾಳವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂದಿನ ತನಿಖೆ ಆರಂಭಿಸಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

