HomeKarnatakaBREAKING: ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು ದುರಂತ ಪ್ರಕರಣ: ಮಗು ಸೇರಿ ಒಂದೇ ಕುಟುಂಬದ...

BREAKING: ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು ದುರಂತ ಪ್ರಕರಣ: ಮಗು ಸೇರಿ ಒಂದೇ ಕುಟುಂಬದ 6 ಜನರು ದಾರುಣ ಸಾವು

ಕೊಪ್ಪಳ: ಟ್ಯಾಂಕರ್ ಹಿಂದಿನಿಂದ ಬಂದು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ಸೇತುವೆ ಮೇಲಿನಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು 6 ಜನರು ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.

ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಒಂದು ವರ್ಷದ ಮಗು ಸೇರಿ ಒಂದೇ ಕುಟುಂಬದ 6 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ, ಕೊಪ್ಪಳ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ನಿವಾಸಿಗಳು. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular