HomeKarnatakaಚುನಾವಣೆ ಕೊನೆ ಕ್ಷಣದಲ್ಲಿ ಬಿಜೆಪಿಗೆ ಶಾಕ್: ಎಂಎಲ್ಸಿ ಕೆ.ಪಿ. ನಂಜುಂಡಿ ನಾಳೆ ಕಾಂಗ್ರೆಸ್ ಸೇರ್ಪಡೆ

ಚುನಾವಣೆ ಕೊನೆ ಕ್ಷಣದಲ್ಲಿ ಬಿಜೆಪಿಗೆ ಶಾಕ್: ಎಂಎಲ್ಸಿ ಕೆ.ಪಿ. ನಂಜುಂಡಿ ನಾಳೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪಕ್ಷ ಸೇರ್ಪಡೆ ಕುರಿತಾಗಿ, ನಂಜುಂಡಿ ಮಾತುಕತೆ ನಡೆಸಿದ್ದಾರೆ. ಅವರ ಪಕ್ಷ ಸೇರ್ಪಡೆಗೆ ನಾಯಕರು ಒಪ್ಪಿಗೆ ನೀಡಿದ್ದು, ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ವಿಧಾನಸಭೆಯಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾಯಿತರಾಗಿರುವ ನಂಜುಂಡಿ ಅವರ ಸದಸ್ಯತ್ವ ಜೂನ್ 17ಕ್ಕೆ ಮುಕ್ತಾಯವಾಗಲಿದೆ. ಮಂಗಳವಾರ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular